ಚಾಮರಾಜನಗರ: ಏಪ್ರಿಲ್ 9 ರಂದು ಬಂಡೀಪುರಕ್ಕೆ (Bandipura) ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಭದ್ರತಾ ಕಾರಣಗಳಿಂದ ಏಪ್ರಿಲ್ 8 ಮತ್ತು 9 ರಂದು ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಲಾಗಿದೆ.
ಏಪ್ರಿಲ್ 4 ರಿಂದ 9 ರ ವರೆಗೂ ಬಂಡೀಪುರದಲ್ಲಿ ಅರಣ್ಯ ಇಲಾಖೆಗೆ ಸೇರಿದ ಅತಿಥಿಗೃಹ, ಕಾಟೇಜ್‌ಗಳ ಬುಕಿಂಗ್ ಸಹ ಬಂದ್ ಮಾಡಲಾಗಿದೆ ಎಂದು ಬಂಡೀಪುರ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಏಪ್ರಿಲ್ 11ರ ವರೆಗೆ ಮಾಡಾಳ್‌ಗೆ ಜೈಲು – ಜೈಲಿನ ಪ್ರಕಾರವೇ ಊಟ
Advertisement
Advertisement
ದೇಶದಲ್ಲಿ ಹುಲಿ ಯೋಜನೆಗೆ 50 ವರ್ಷ ಹಿನ್ನಲೆ ಮೈಸೂರಿನಲ್ಲಿ 3 ದಿನಗಳ ಮೆಗಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಇತ್ತೀಚಿನ ಹುಲಿಗಣತಿ ವರದಿ, ಹುಲಿಸಂರಕ್ಷಣೆಗಾಗಿ ಸರ್ಕಾರ ಕೈಗೊಂಡ ಕ್ರಮಗಳ ವರದಿ ಹಾಗೂ ನಾಣ್ಯ ಸ್ಮರಣಿಕೆಯನ್ನು ಅವರು ಮೈಸೂರಿನಲ್ಲಿ ಬಿಡುಗಡೆ ಮಾಡಲಿದ್ದಾರೆ.
Advertisement
Advertisement
ಅಂದೇ ಬಂಡೀಪುರಕ್ಕೂ ಭೇಟಿ ನೀಡಲಿರುವ ಮೋದಿ ಸಫಾರಿ ನಡೆಸಲಿದ್ದಾರೆ. ಹೀಗಾಗಿ ಸಫಾರಿ ಮಾರ್ಗಗಳನ್ನು ಅರಣ್ಯ ಇಲಾಖೆ ದುರಸ್ತಿ ಮಾಡಲು ಮುಂದಾಗಿದೆ. ಇದನ್ನೂ ಓದಿ: ಹಾಸನ ಟಿಕೆಟ್‌ಗೆ ಒತ್ತಡ ತರಬೇಡಿ, ನಾವು ಕೊಡುವ ಅಭ್ಯರ್ಥಿ ಪರ ಕೆಲಸ ಮಾಡಿ: ದೇವೇಗೌಡ ಕಿವಿಮಾತು