ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಹಿನ್ನೆಲೆ ಒಂದು ವಾರಗಳ ಕಾಲ ಸಫಾರಿ ಬಂದ್ ಮಾಡಲಾಗಿದ್ದು, ಪ್ರವಾಸಿಗರಿಗೆ ಈ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಬೆಂಕಿಯಿಂದ ಬಂಡಿಪುರ ಕಾಡಿನ ಸಫಾರಿ ಝೋನ್ ನಾಶವಾಗಿದೆ. ಆದರಿಂದ ಸಫಾರಿ ಝೋನ್‍ನಲ್ಲಿ ಸಫಾರಿ ಬಂದ್ ಮಾಡಲಾಗಿದೆ. ನೂರಾರು ಪ್ರವಾಸಿಗರು ಸಫಾರಿಗಾಗಿ ಪ್ರತಿ ನಿತ್ಯ ಬಂಡಿಪುರಕ್ಕೆ ಬರುತ್ತಿದ್ದರು. ಸಫಾರಿಯಿಂದ ತಿಂಗಳಿಗೆ ಬಂಡಿಪುರದಲ್ಲಿ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿತ್ತು. ಆದ್ರೆ ಕಳೆದ ನಾಲ್ಕೈದು ದಿನಗಳಿಂದ ಅರಣ್ಯದಲ್ಲಿ ಹೊತ್ತಿಕೊಂಡಿರುವ ಕಾಡ್ಗಿಚ್ಚಿನಿಂದ ಪ್ರವಾಸಿಗರಿಲ್ಲದೆ ಬಂಡಿಪುರ ಬಿಕೋ ಎನ್ನುತ್ತಿದೆ.
Advertisement
Advertisement
ಕಾಡ್ಗಿಚ್ಚಿನಿಂದ ಬಂಡಿಪುರದ ಸುಮಾರು 5 ಸಾವಿರ ಎಕರೆಗೂ ಅಧಿಕ ಅರಣ್ಯ ಪ್ರದೇಶ ನಾಶವಾಗಿದೆ. ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ಹರಸಾಹಸ ಪಟ್ಟಿದ್ದು, ಸದ್ಯ ಬೆಂಕಿ ಹತೋಟಿಗೆ ಬಂದಿದೆ ಎನ್ನಲಾಗುತ್ತಿದೆ.
Advertisement
ಅಲ್ಲದೆ ಬಂಡಿಪುರದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಹಿನ್ನೆಲೆ ಊಟಿ- ಗುಡ್ಲುಪೇಟೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೇ ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಊಟಿ- ಗುಡ್ಲುಪೇಟೆ ಸಂಚಾರಕ್ಕೆ ಅಣುವು ಮಾಡಿಕೊಡಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv