ಬೆಂಗಳೂರು: ನಮ್ಮ ವಾಲ್ಮೀಕಿ ಸಮುದಾಯದ ಶಾಸಕರು ಪಕ್ಷಾತೀತವಾಗಿ ರಾಜೀನಾಮೆ ಕೊಟ್ಟರೆ ಮುಖ್ಯಮಂತ್ರಿ ಗೊಟಕ್ ಅಂದುಬಿಡ್ತಾರೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದು ಚರ್ಚೆಗೆ ಗ್ರಾಸವಾಗಿದೆ.
ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಹೋರಾಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, 17 ಮಂದಿ ವಾಲ್ಮೀಕಿ ಸಮುದಾಯದ ಶಾಸಕರು ಇದ್ದಾರೆ. ಇವರು ರಾಜೀನಾಮೆ ನೀಡಿದರೆ ಸರ್ಕಾರ ಉರುಳುತ್ತದೆ ಎಂದು ಹೇಳಿದರು.
Advertisement
Advertisement
ಮುಖ್ಯಮಂತ್ರಿಗಳ ವಿರುದ್ಧ ಸಿಡಿಮಿಡಿಗೊಂಡ ಸ್ವಾಮೀಜಿ, ಸಿಎಂ ಸರ್ಕಾರ ಉಳಿಸಲು ಕಾಲು ಹಿಡಿಯುತ್ತಾರೆ ಅನ್ನೋದು ನಂಗೆ ಗೊತ್ತಿದೆ. ಅವರು ಸಿಎಂ ಆಗಿ ಮುಂದುವರೆಯಬೇಕೇ? ಬೇಡವಾ ಎಂದು ಇವತ್ತು ನಿರ್ಧಾರವಾಗಲಿ. ನಾವು ಹೇಳಿದರೆ ಮುಖ್ಯಮಂತ್ರಿಯೂ ಕೇಳಬೇಕು ಅವರಪ್ಪನೂ ಕೇಳಬೇಕು ಎಂದು ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಈ ವಿಚಾರವಾಗಿ ಮಾತನಾಡಲು ಬಂದಿದ್ದ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಮುಂದೆಯೇ ಮುಖ್ಯಮಂತ್ರಿಗಳಿಗೆ ಅವಾಜ್ ಹಾಕಿದ ಸ್ವಾಮೀಜಿ, ನಮ್ಮವರು ರಾಜೀನಾಮೆ ಕೊಟ್ಟರೆ ಸರ್ಕಾರ ಉಳಿಯಲ್ಲ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಗೆ ಸುದೀಪ್ ಬರಬೇಕಾಗಿತ್ತು. ಆದರೆ ಅವರು ಶೂಟಿಂಗ್‍ನಲ್ಲಿದ್ದಾರೆ. ಅದ್ದರಿಂದ ಬಂದಿಲ್ಲ ಅವರು ವಿಡಿಯೋ ಮೆಸೇಜ್ ಮಾಡಿ ಕಳಿಸಿದ್ದಾರೆ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಸ್ವಾಮೀಜಿ ತಿಳಿಸಿದರು. ಈ ವೇಳೆ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಿಡಿದ ಜನರು ಡಿಸಿಎಂಗೆ ಮಾತನಾಡಲು ಬಿಡದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಗದ್ದಲ ಉಂಟುಮಾಡಿದರು.