ಬೆಂಗಳೂರು: ಆಫ್ರಿಕಾ ಖಂಡದಿಂದ ಬಂದು ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ 21 ಆಫ್ರಿಕಾ ಪ್ರಜೆಗಳನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪ್ರಜೆಗಳೆಲ್ಲರೂ ವಿದ್ಯಾಭ್ಯಾಸ, ಟೂರಿಸ್ಟ್ ಹಾಗು ಬಿಸಿನೆಸ್ ವೀಸಾದ ಮೇಲೆ ಭಾರತಕ್ಕೆ ಬಂದಿದ್ದರು. ಆರೋಪಿಗಳು ವೀಸಾ ಅವಧಿ ಮುಗಿದಿದ್ದರೂ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಾಡಿಗೆ ಮನೆಗಳಲ್ಲಿ ಅಕ್ರಮವಾಗಿ ನೆಲೆಸಿದ್ದರು.
ಈ ವಿಷಯ ತಿಳಿದು ವಿದೇಶಿ ಪ್ರಜೆಗಳ ಮೇಲೆ ಕಣ್ಣಿಟ್ಟದ್ದ ಪೊಲೀಸರು ಇಂದು ಎಫ್‍ಆರ್‍ಆರ್‍ಒ ಮತ್ತು ಬೆಂಗಳೂರು ಈಶಾನ್ಯ ವಿಭಾಗ ಪೊಲೀಸರು ಜಂಟಿ ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ನಂತರ ಬಂಧಿತ ವಿದೇಶಿ ಪ್ರಜೆಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.