ಕರ್ನಾಟಕ ಸರ್ಕಾರದ ಹೆಮ್ಮೆಯ ಉತ್ಸವವಾದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bangalore Chirotsava) ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರೋತ್ಸವದ ಲೋಗೋವನ್ನು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಅನಾವರಣ ಮಾಡಿದರು. ಉತ್ಸವದ ಉದ್ಘಾಟನಾ ಸಮಾರಂಭ 2024ರ ಫೆಬ್ರವರಿ 29 ರಂದು ವಿಧಾನಸೌಧದ ಮುಂಭಾಗ ನಡೆಯಲಿದ್ದು, ಮಾರ್ಚ್ 7ರಂದು ಸಮಾರೋಪ ಸಮಾರಂಭ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ.
Advertisement
15 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಈ ಬಾರಿ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಚಲನಚಿತ್ರ ಸಂಘಟನೆಗಳ ಅಂತಾರಾಷ್ಟ್ರೀಯ ಮಹಾ ಒಕ್ಕೂಟ (FIAPF) ಮಾನ್ಯತೆ ಪಡೆದ ಈ ಚಲನಚಿತ್ರೋತ್ಸವ, ರಾಷ್ಟ್ರೀಯ ಚಲನಚಿತ್ರ ಪ್ರತಿನಿಧಿಗಳು, ಚಲನಚಿತ್ರ ನಿರ್ಮಾಪಕರು, ಕಲಾವಿದರು, ನಿರ್ದೇಶಕರು, ತಂತ್ರಜ್ಞರು ಮತ್ತಿತರ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.
Advertisement
Advertisement
ಸಮಾರೋಪ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Advertisement
ಬೆಂಗಳೂರಿನ ರಾಜಾಜಿನಗರದಲ್ಲಿರುವ ಒರಿಯಾನ್ ಮಾಲ್ ನ ಪಿವಿಆರ್ ಸಿನಿಮಾದ 11 ಪರದೆಗಳು, ಚಾಮರಾಜ ಪೇಟೆಯಲ್ಲಿರುವ ರಾಜ್ ಕುಮಾರ್ ಕಲಾ ಭವನ, ಬನಶಂಕರಿ ಎರಡನೇ ಹಂತದಲ್ಲಿರುವ ಸುಚಿತ್ರಾ ಚಿತ್ರಸಮಾಜದಲ್ಲಿ ಪ್ರತಿನಿಧಿಗಳಿಗೆ ಮಾರ್ಚ್ 1 ರಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದೆ.
ಸುಮಾರು 50ಕ್ಕೂ ಹೆಚ್ಚು ದೇಶಗಳಿಂದ 200ಕ್ಕೂ ಹೆಚ್ಚು ಚಿತ್ರಗಳು ವಿವಿಧ ವಿಭಾಗಗಳಲ್ಲಿ ಪ್ರದರ್ಶನಗೊಳ್ಳಲಿವೆ.