ಮಾರ್ಚ್ 23 ರಿಂದ ಬೆಂಗಳೂರು (Bangalore) ಅಂತಾರಾಷ್ಟ್ರೀಯ ಚಿತ್ರೋತ್ಸವ ನಿಗದಿಯಾಗಿದೆ. ಇದು 14ನೇ ಅಂತಾರಾಷ್ಟ್ರೀಯ ಬೆಂಗಳೂರು ಚಿತ್ರೋತ್ಸವ (Film Festival) ಆಗಿದ್ದು, ನಾನಾ ರೀತಿಯ ಬದಲಾವಣೆಗಳನ್ನು ಮಾಡುವ ಮೂಲಕ ಮತ್ತಷ್ಟು ನಿರೀಕ್ಷೆ ಮೂಡುವಂತೆ ಮಾಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ. ಸರಕಾರದಿಂದ ಹಣ ಬಿಡುಗಡೆ ಆಗಿಲ್ಲ ಎನ್ನುವ ಕಾರಣಕ್ಕಾಗಿ ಚಿತ್ರೋತ್ಸವ ನಡೆಯುತ್ತದೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಕೊನೆಗೂ ಹಣ ಬಿಡುಗಡೆಯಾಗಿ ಚಿತ್ರೋತ್ಸವದ ಕೆಲಸಗಳಿಗೆ ವೇಗ ಬಂದಿದೆ.
Advertisement
ಈ ಬಾರಿ ನಡೆಯುವ ಚಿತ್ರೋತ್ಸವದ ಕುರಿತು ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ (Ashok Kashyap) ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಲವು ವಿಷಯಗಳನ್ನು ಹಂಚಿಕೊಂಡರು. ಅದರಲ್ಲೂ ಸಿನಿಮಾ ಸ್ಪರ್ಧೆಯಲ್ಲಿ ಗೆದ್ದ ಚಿತ್ರಗಳ ಬಹುಮಾನ ಮೊತ್ತವನ್ನು ತಿಳಿಸಿ ಅಚ್ಚರಿ ಮೂಡಿಸಿದರು. ಈ ಬಾರಿ ಮೊದಲ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದ ಚಿತ್ರಕ್ಕೆ ಬರೋಬ್ಬರಿ ಹತ್ತು ಲಕ್ಷ ರೂಪಾಯಿ ಸಿಗುವ ಸಾಧ್ಯತೆ ಇದೆ. ಈವರೆಗೂ ಮೂರು ಲಕ್ಷ ರೂಪಾಯಿಗಳನ್ನು ಮಾತ್ರ ನೀಡಲಾಗುತ್ತಿತ್ತು. ಈ ಬಾರಿ ಹತ್ತು ಲಕ್ಷಕ್ಕೆ ಏರಿಸಿ ಎಂದು ಸರಕಾರಕ್ಕೆ ಅಕಾಡೆಮಿ ಶಿಫಾರಸು ಮಾಡಿದೆಯಂತೆ. ಇದನ್ನೂ ಓದಿ: ನನ್ನ ಸಾವಿಗೆ ಇವರೇ ಕಾರಣವೆಂದು ಸೂಸೈಡ್ ನೋಟ್ ಬರೆದಿಟ್ಟ ʻವರ್ಷಧಾರೆʼ ನಟಿ ಪಾಯಲ್
Advertisement
Advertisement
ಏಷಿಯನ್, ಭಾರತೀಯ ಹಾಗೂ ಕನ್ನಡ ಸಿನಿಮಾ ಹೀಗೆ ಮೂರು ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತಿಯ ಬಹುಮಾನಗಳನ್ನು ನೀಡಲಾಗುತ್ತಿದ್ದು, ಕ್ರಮವಾಗಿ 10 ಲಕ್ಷ ರೂ, 5 ಲಕ್ಷ ರೂ ಹಾಗೂ 3 ಲಕ್ಷ ರೂಪಾಯಿ ಬಹುಮಾನವಾಗಿ ಇರಲಿದೆ ಎಂದೂ ಕಶ್ಯಪ್ ತಿಳಿಸಿದ್ದಾರೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ಮಾರ್ಚ್ 23 ರಂದು ಸಂಜೆ 6 ಗಂಟೆಗೆ ಚಿತ್ರೋತ್ಸವ ಉದ್ಘಾಟನೆಯಾಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಚಿತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ.
Advertisement
ಈ ಬಾರಿಯ ಚಿತ್ರೋತ್ಸವದ ಮತ್ತೊಂದು ವಿಶೇಷವೆಂದರೆ, ಮೊನ್ನೆಯಷ್ಟೇ ನಡೆದ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಏಳು ಆಸ್ಕರ್ ಪ್ರಶಸ್ತಿಯನ್ನು ಪಡೆದಿರುವ ‘ಎವ್ರಿಥಿಂಗ್ ಎವ್ರಿವೇರ್ ಆಲ್ ಆಟ್ ಒನ್ಸ್’ ಸಿನಿಮಾ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲಿದೆ. ಜೊತೆಗೆ ವಿಶ್ವದ 61 ಸಿನಿಮಾಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಭಾಗಿಯಾಗಲಿವೆ. ಒಟ್ಟು 50 ದೇಶಗಳ 200 ಚಿತ್ರಗಳನ್ನು ಈ ಆವೃತ್ತಿಯಲ್ಲಿ ಪ್ರದರ್ಶಿಸಲು ತೀರ್ಮಾನಿಸಲಾಗಿದೆ ಎಂದು ಕಶ್ಯಪ್ ತಿಳಿಸಿದ್ದಾರೆ.