ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಈ ವರ್ಷ ನಡೆಯುವುದು ಅನುಮಾನ ಎನ್ನಲಾಗಿತ್ತು. ಚುನಾವಣೆ ನೀತಿಸಂಹಿತೆ ಹಾಗೂ ಇನ್ನೂ ಸರಕಾರ ಅನುದಾನ ಬಿಡುಗಡೆ ಮಾಡದೇ ಇರುವ ಕಾರಣದಿಂದಾಗಿ ಈ ವರ್ಷ ಚಿತ್ರೋತ್ಸವ ನಡೆಯುವುದರ ಬಗ್ಗೆ ಗೊಂದಲ ಮೂಡಿತ್ತು. ಆದರೆ, ಎಲ್ಲದಕ್ಕೂ ತೆರೆ ಎಳೆಯಲಾಗಿದೆ. ಫೆಬ್ರವರಿಯಲ್ಲಿ ಫಿಲ್ಮೋತ್ಸವ ನಡೆಸದೇ ಮಾರ್ಚ್ ಕೊನೆಯ ವಾರದಲ್ಲಿ ಚಿತ್ರೋತ್ಸವ ನಡೆಸುವುದಾಗಿ ಅಕಾಡೆಮಿ ತಿಳಿಸಿದೆ.
14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಅನಾವರಣ ಮಾಡಿದರು. ನಗರದ ಪದ್ಮನಾಭನಗರದಲ್ಲಿ ನಿನ್ನೆ ಸಂಜೆ ನಡೆದ ಸಮಾರಂಭದಲ್ಲಿ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಂಡಿದ್ದು, 2023 ಮಾರ್ಚ್ 23ರಿಂದ 30ರವರೆಗೆ ಚಿತ್ರೋತ್ಸವ ನಡೆಯಲಿದೆ. ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ರಸ್ತೆ ಇಂದು ಉದ್ಘಾಟನೆ
ಸಮಾರಂಭದಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿ ಅಧ್ಯಕ್ಷರೂ ಆದ ಕಂದಾಯ ಸಚಿವ ಆರ್.ಅಶೋಕ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಸೇರಿದಂತೆ ಸಂಸದರು, ಶಾಸಕರು, ಹಿರಿಯ ಅಧಿಕಾರಿಗಳು, ಚಲನಚಿತ್ರರಂಗದ ಗಣ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k