ಬೆಂಗಳೂರು: ಸಿಎಂ ಯಡಿಯೂರಪ್ಪ ವಿರುದ್ಧ ಟ್ವಿಟ್ಟರ್ ವಾರ್ ನಡೆಸುತ್ತಿರುವ ಜೆಡಿಎಸ್ ಬೆಳಗ್ಗೆಯಿಂದ ಮೂರು ಟ್ವೀಟ್ ಮಾಡಿ ಬಿಎಸ್‍ವೈನ್ನು ತರಾಟೆಗೆ ತೆಗೆದುಕೊಂಡಿದೆ.
ಉತ್ತರ ಕರ್ನಾಟಕದಲ್ಲಿ ಮಳೆ ಆಗುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳದ್ದಕ್ಕೆ ಬಿಎಸ್‍ವೈ ಅವರನ್ನು ಟೀಕೆ ಮಾಡಿರುವ ಜೆಡಿಎಸ್ ರೋಮ್ ಹೊತ್ತಿ ಉರಿಯುವಾಗ ದೊರೆ ನಿರೋ ಪಿಟೀಲು ಬಾರಿಸುತ್ತಿದ್ದ. ಹಾಗೆ ಯಡಿಯೂರಪ್ಪ ದೆಹಲಿಗೆ ಹೋಗಿ ಕುಳಿತಿದ್ದಾರೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.
Advertisement
ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ.ಕರ್ನಾಟಕದಲ್ಲಿ ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿಮಂಡಲವೂ ಇಲ್ಲ.ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ..
— Janata Dal Secular (@JanataDal_S) August 7, 2019
Advertisement
ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ, ಯಡಿಯೂರಪ್ಪ ದೆಹಲಿಗೆ ಹೋಗಿ ಕುಳಿತಿದ್ದಾರೆ. ಕರ್ನಾಟಕ ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿ ಮಂಡಲವು ಇಲ್ಲ. ಇದೇನಾ ನಿಮ್ಮ ಜನ ಮೆಚ್ಚಿನ ಆಡಳಿತ ಮರ್ಯಾದ ಪುರುಷೋತ್ತಮರೇ ಎಂದು ಜೆಡಿಎಸ್ ಟ್ವೀಟ್ ಮಾಡಿದೆ. ನಂತರ ಎರಡನೇ ಟ್ವೀಟ್ ಮಾಡಿರುವ ಜೆಡಿಎಸ್ ಸರ್ಕಾರ ಕಾಣೆಯಾಗಿದೆ ಎಂದು ಹೇಳುವ ಮೂಲಕ ಬಿಎಸ್‍ವೈ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
Advertisement
ಸರ್ಕಾರ ಕಾಣೆಯಾಗಿದೆ…
— Janata Dal Secular (@JanataDal_S) August 7, 2019
Advertisement
ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ಜನ ನರಳುತ್ತಿದ್ದಾರೆ. ಇದೂವರೆಗೂ ಗಂಜಿ ಕೇಂದ್ರವನ್ನು ಸರ್ಕಾರ ಸ್ಥಾಪಿಸಿಲ್ಲ. ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಿಲ್ಲ. ಮುಖ್ಯಮಂತ್ರಿ ಇಲ್ಲ, ಮಂತ್ರಿಯೂ ಇಲ್ಲ ಎಂದು ಟ್ವೀಟ್ ಮಾಡಿ ತರಾಟೆಗೆ ತೆಗೆದುಕೊಂಡಿದೆ.
ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ಭಾಗದಲ್ಲಿ ಅತಿವೃಷ್ಟಿಯಿಂದ ಜನರು ನರಳುತ್ತಿದ್ದಾರೆ.
ಇದುವರೆಗೂ ಸರ್ಕಾರ ಗಂಜಿ ಕೇಂದ್ರಗಳನ್ನು ಸ್ಥಾಪಿಸಿಲ್ಲ, ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಿಲ್ಲ. ಮುಖ್ಯಮಂತ್ರಿ ಇಲ್ಲ, ಮಂತ್ರಿಗಳೂ ಇಲ್ಲ.
ಜೆಡಿಎಸ್ ಪಕ್ಷದ ಕಾರ್ಯಕರ್ತರು ಸಾಧ್ಯವಾದಷ್ಟು ಜನರಿಗೆ ಸಹಾಯ ಮಾಡಲು ಕೋರಲಾಗಿದೆ.
— Janata Dal Secular (@JanataDal_S) August 7, 2019