ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರಪತಿ ಅವರ ಆಡಳಿತ ಬಂದರೆ ಅದಕ್ಕೆ ಈ ಜಂಟಿ ಪಕ್ಷಗಳೇ ಕಾರಣ ಆಗುತ್ತವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ಇಂದು ಬೆಳಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರಕ್ಕೆ ವರದಿ ಕೊಟ್ಟಿದ್ದಾರೆ. ಮೈತ್ರಿ ಪಕ್ಷಗಳು ಸುಪ್ರೀಂಕೋರ್ಟ್ ಗೆ ಹೋದರೂ ಪ್ರಯೋಜನ ಇಲ್ಲ ಎಂದು ಹೇಳಿದರು.
Advertisement
Advertisement
ಈ ಹಿಂದೆ ರಾಜ್ಯಪಾಲರು ಯಡಿಯೂರಪ್ಪನವರಿಗೆ ಬಹುಮತ ಸಾಬೀತು ಮಾಡಲು ಸಮಯ ಕೊಟ್ಟಿದ್ದರು. ಅಂದು ಬಿಎಸ್‍ವೈ ರಾಜ್ಯಪಾಲರು ನಿಗದಿ ಮಾಡಿದ್ದ ಸಮಯದಲ್ಲೇ ನಿಯಮವನ್ನು ಪಾಲಿಸಿದ್ದರು. ಆದರೆ ಈ ಸರ್ಕಾರ ರಾಜ್ಯಪಾಲರ ಸಂದೇಶಗಳನ್ನು ಗೌರವಿಸಿಲ್ಲ. ಈ ಸರ್ಕಾರಕ್ಕೆ ಬಹುಮತ ಇಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.
Advertisement
Advertisement
ಸೋಮವಾರ ಈ ಸರ್ಕಾರ ಬಹುಮತ ಕಳೆದುಕೊಳ್ಳುತ್ತದೆ. ಮತ್ತೊಮ್ಮೆ ಚುನಾವಣೆಗೆ ಹೋಗಲು ಯಾರಿಗೂ ಇಷ್ಟ ಇಲ್ಲ. ರಾಜ್ಯದ ರಾಜಕೀಯ ಬಿಕ್ಕಟ್ಟು ನೋಡಿ ರಾಷ್ಟ್ರಪತಿಯವರೇ ಮಧ್ಯ ಪ್ರವೇಶ ಮಾಡಬಹುದು. ರಾಷ್ಟ್ರಪತಿ ಆಡಳಿತ ಬಂದರೆ ಅದು ಈ ಸರ್ಕಾರದ ಮೊಂಡುತನದಿಂದಲೇ ಬರಬಹುದು ಎಂದು ಹೇಳಿದರು.