ಬೆಂಗಳೂರು: ಆತ್ಮೀಯ ಗೆಳೆಯನ ಸಾವಿನ ಸುದ್ದಿ ಆಘಾತ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಗೆಳೆಯ, ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು, ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ್ ಅವರ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ್ ಅವರು ಕರ್ನಾಟಕದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ ಅವರ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ ಅವರು ಕರ್ನಾಟಕದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸಿದ್ದರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 31, 2019
Advertisement
ಸೋಮವಾರ ರಾತ್ರಿಯಿಂದ ಸಿದ್ಧಾರ್ಥ್ ಕಾಣೆಯಾಗಿದ್ದರು. ಆ ಬಳಿಕ ಅವರ ಪತ್ತೆಗಾಗಿ ಸಾಕಷ್ಟು ಕುಡುಕಾಟ ನಡೆಸಲಾಗಿತ್ತು. ಆದರೆ ಇಂದು ಬೆಳಗ್ಗೆ ಸಿದ್ಧಾರ್ಥ್ ಮೃತದೇಹ ಮಂಗಳೂರು- ಉಳ್ಳಾಲ ನಡುವೆ ಇರುವ ನೇತ್ರಾವತಿ ನದಿ ಸಮೀಪದ ಹೊಯಿಗೆ ಬಜಾರ್ ಎಂಬ ಪ್ರದೇಶದಲ್ಲಿ ದೊರಕಿದೆ. ಇಂದು ಬೆಳಗ್ಗೆ 6.30ರ ಸುಮಾರಿಗೆ ಸ್ಥಳೀಯ ಮೀನುಗಾರರು ಮೀನು ಹಿಡಿಯಲು ಹೋದಾಗ ನದಿಯಲ್ಲಿ ತೇಲಾಡುತ್ತಿದ್ದ ಶವವನ್ನು ಕಂಡು ಅನುಮಾನದಿಂದ ದೋಣಿ ಬದಿಯಲ್ಲಿ ಹಿಡಿದುಕೊಂಡು ದಡ ತಲುಪಿಸಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.