ಬೆಂಗಳೂರು: ಲಿಂಗಾಯತರ ಮೇಲೆ ಕಾಳಜಿ ಇದ್ದರೆ ಮಾನ್ಯ ಗೃಹ ಮಂತ್ರಿ ಎಂ.ಬಿ ಪಾಟೀಲ್ ಅವರು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದು ಬಹುಕಾಲದಿಂದಲೂ ಲಿಂಗಾಯತರ ನಾಯಕರಾದ ಬಿ.ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಶಾಸಕ ಸಿ.ಟಿ ರವಿ ಅವರು ಹೇಳಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಲಿಂಗಾಯತ ಸಮುದಾಯದ ನಾಯಕರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪ ಮಾಡಿದ್ದ ಎಂ.ಬಿ ಪಾಟೀಲ್ ವಿರುದ್ಧ ಟ್ವೀಟ್ ಮಾಡಿ ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ.
Advertisement
ಲಿಂಗಾಯುತ ಸಮುದಾಯಕ್ಕೆ ಸೇರಿದ ಸಂಸದ ಸುರೇಶ್ ಅಂಗಡಿ ಅವರಿಗೆ ಕೇಂದ್ರ ಸರ್ಕಾರದಿಂದ ರಾಜ್ಯ ಸಚಿವ ಸ್ಥಾನ ನೀಡಿರುವುದಕ್ಕೆ ಪಾಟೀಲ್ ಅವರು ಕೇಂದ್ರ ಸರ್ಕಾರ ಲಿಂಗಾಯತರಿಗೆ ಮೋಸ ಮಾಡುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದರು.
Advertisement
ಮಾನ್ಯ @MBPatil ಅವರೆ,
ರೈತ ಬಂಧು @BSYBJP ರವರನ್ನು ಈ ಕೂಡಲೇ ಮುಖ್ಯಮಂತ್ರಿಯಾಗಿ ಮಾಡಲು @BJP4Karnataka ಸಿದ್ಧವಿದೆ.
ನಿಮ್ಮ ಕೈಯಲ್ಲಿ ಇಲ್ಲದ ಭವಿಷ್ಯ ಹೇಳುವುದನ್ನು ಬಿಟ್ಟು ವರ್ತಮಾನದ ಬಗ್ಗೆ ಮಾತನಾಡಿ.
ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ನಿಮ್ಮ ಕೈಯಲ್ಲಿದೆ. ಈಗ ತೋರಿಸಿ ನಿಮ್ಮ ಲಿಂಗಾಯತ ಪರ ಕಾಳಜಿಯನ್ನು. https://t.co/RpzXCMQKaK
— C T Ravi ???????? ಸಿ ಟಿ ರವಿ (@CTRavi_BJP) June 3, 2019
Advertisement
ಈ ಟ್ವೀಟ್ ಗೆ ಸಿಟಿ ರವಿ, ಬಿಜೆಪಿ ಪಕ್ಷ ಲಿಂಗಾಯುತ ಸಮುದಾಯದ ನಾಯಕರರಾದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಸಿದ್ಧವಿದೆ. ಲಿಂಗಾಯುತ ಸಮುದಾಯದ ಮೇಲೆ ಕಾಳಜಿ ಇರುವ ನೀವು ಏಕೆ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದು ಲಿಂಗಾಯುತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಬಾರದು ಎಂದು ಪ್ರಶ್ನೆ ಕೇಳುವ ಮೂಲಕ ಕಲೆಳೆದಿದ್ದಾರೆ.
Advertisement
Dear @MBPatil Avare,
Why are you talking about a Union Minister when @BJP4Karnataka is ready to make Sri @BSYBJP as Chief Minister?
If you are so genuinely concerned about Lingayats why don't you resign from your post and support us to install the tallest Lingayat leader as CM? https://t.co/kOXK1GOvig
— C T Ravi ???????? ಸಿ ಟಿ ರವಿ (@CTRavi_BJP) June 3, 2019
ಪಾಟೀಲ್ ಹೇಳಿದ್ದೇನು?
ಮಾಧ್ಯಮಗಳ ಜೊತೆ ವಿಜಯಪುರದಲ್ಲಿ ಮಾತನಾಡಿದ ಪಾಟೀಲ್ ಅವರು, ಸುರೇಶ್ ಅಂಗಡಿ ಹಾಗೂ ಪ್ರಹ್ಲಾದ್ ಜೋಶಿಗೆ ಮಾನದಂಡ ಬೇರೆ-ಬೇರೆಯಾಗಿದೆ. ಇಬ್ಬರು ನಾಲ್ಕು ಬಾರಿ ಗೆದ್ದು ಬಂದಿದ್ದು, ಅನುಭವ ಹೊಂದಿದ್ದಾರೆ. ಆದರೆ ಪ್ರಹ್ಲಾದ್ ಜೋಶಿಗೆ ಕ್ಯಾಬಿನೆಟ್ ಸ್ಥಾನ ಸಿಕ್ಕಿದರೆ ಸುರೇಶ್ ಅಂಗಡಿಯವರು ರಾಜ್ಯ ಸಚಿವರು. ಇಬ್ಬರು ಒಂದೇ ಸಮಾನವಾಗಿದ್ದರೂ ವ್ಯತ್ಯಾಸ ಮಾಡಿದ್ದಾರೆ. ಈ ವಿಚಾರವನ್ನು ಲಿಂಗಾಯತರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದರು.
Mr Prahlad Joshi is a 4 time MP. Mr Suresh Angadi is also a 4 time MP.
Mr Joshi is made Cabinet Minister with 3 portfolios, Mr Angadi just a MoS.
This is an injustice for Lingayats. WHY this differential treatment @BJP4Karnataka @BJP4India ?
— M B Patil (@MBPatil) June 3, 2019
ಸುರೇಶ್ ಅಂಗಡಿಯವರಿಗೂ ಕ್ಯಾಬಿನೆಟ್ ದರ್ಜೆ ನೀಡಬೇಕಿತ್ತು. ಇದಕ್ಕೆ ಬಿಜೆಪಿ ನಾಯಕರು ಉತ್ತರ ನೀಡಬೇಕು. ಇದು ಒಂದು ದೊಡ್ಡ ಅನ್ಯಾಯ. ಈ ಮೂಲಕ ಲಿಂಗಾಯತರಿಗೆ ಅಗೌರವ ತೋರಿಸಿದ್ದಾರೆ. ಪಾಪ ಸುರೇಶ್ ಅಂಗಡಿಯವರು ಕೇಂದ್ರದ ರಾಜ್ಯ ಸಚಿವರು. ಅದಕ್ಕಾಗಿ ಪ್ರಹ್ಲಾದ್ ಜೋಶಿ ಕಡೆಗೆ ಅಂಗಡಿ ನೋಡಬೇಕು. ಸ್ವಾಭಿಮಾನವಿದ್ದರೆ ಸುರೇಶ್ ಅಂಗಡಿ ಜಾಗದಲ್ಲಿ ನಾನು ಇದ್ದಿದ್ದರೆ ಸಚಿವ ಸ್ಥಾನ ತಿರಸ್ಕಾರ ಮಾಡುತ್ತಿದ್ದೆ ಎಂದು ಹೇಳಿಕೆ ನೀಡಿದ್ದರು.