ಬೆಂಗಳೂರು: ಉತ್ತರ ಕರ್ನಾಟಕದ ಭೀಕರ ಪ್ರವಾಹದ ಹಿನ್ನೆಲೆಯಲ್ಲಿ, ಸಮಾಜದಲ್ಲಿ ಶಾಂತಿ ಕಾಪಾಡುವ ಪೊಲೀಸರು ಸಹ ಸಾರ್ವಜನಿಕರೊಂದಿಗೆ ತಮ್ಮ ಕೈಲಾದಷ್ಟು ಸಹಾಯಕ್ಕೆ ಸ್ಪಂದಿಸಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ಟೌನ್ ಠಾಣೆ ಪೊಲೀಸರು ಅಗತ್ಯ ವಸ್ತುಗಳ ಸಹಾಯಕ್ಕೆ ಮುಂದಾಗಿದ್ದಾರೆ. ಇನ್ನೂ ನೆಲಮಂಗಲ ಪಟ್ಟಣದ ಬೀದಿ ಬೀದಿಗಳಲ್ಲಿ ಸಂಚರಿಸಿ ವಸ್ತುಗಳನ್ನು ಸಂಗ್ರಹಿಸಿದ್ದಾರೆ.
ಜೊತೆಗೆ ಪೊಲೀಸರು ಸ್ವಯಂ ಪ್ರೇರಣೆಯಿಂದ ಸಹಾಯ ಮಾಡಿ, ಒಂದು ಕ್ಯಾಂಟರ್ ಲಾರಿ ಲೋಡ್ ವಸ್ತುಗಳ ರವಾನೆ ಮಾಡುತ್ತಿದ್ದಾರೆ. ನೆಲಮಂಗಲ ಟೌನ್ ಎಸ್‍ಐ ಡಿ.ಆರ್. ಮಂಜುನಾಥ್ ನೇತೃತ್ವದಲ್ಲಿ ವಸ್ತುಗಳನ್ನು ಸಂಗ್ರಹಿಸಿ, ಸಾರ್ವಜನಿಕ ವಲಯದಲ್ಲಿ ಪೊಲೀಸರು ಮಾನವೀಯತೆ ಮೆರೆದು, ಮೆಚ್ಚುಗೆಗೆ ಪಾತ್ರರಾಗಿದ್ದಾರೆ.