ಬೆಂಗಳೂರು: ಬಂಧಿಸಲು ಯತ್ನಿಸಿದ ಪೊಲೀಸರ ಮೇಲೆಯೇ ಕೊಲೆಗಾರ ರಾಡ್‍ನಿಂದ ಹಲ್ಲೆ ಮಾಡಲು ಯತ್ನಿಸಿದ್ದು, ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸುವಲ್ಲಿ ಪೀಣ್ಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊಲೀಸರು ಬಂಧಿಸಲು ಆಗಮಿಸಿದ ವೇಳೆ ಕೊಲೆಗಾರ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಮಾತ್ರವಲ್ಲದೆ, ರಾಡ್‍ನಿಂದ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದಾನೆ. ಸಿಟ್ಟಿಗೆದ್ದ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಪೀಣ್ಯ ಪ್ರದೇಶದ ಗಾಣಿಗರಹಳ್ಳಿ ಬಳಿ ಆರೋಪಿ ಸಂದೀಪ್ ಕುಮಾರ್ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಬಂಧಿಸಲು ತೆರಳಿದಾಗ ಪೊಲೀಸರ ಮೇಲೆಯೇ ಕಬ್ಬಿಣದ ರಾಡ್ ನಿಂದ ಹಲ್ಲೆಗೆ ಮುಂದಾಗಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಸಂದೀಪ್ ಕುಮಾರ್ ಕಾಲಿಗೆ ಗುಂಡು ಹೊಡೆದಿದ್ದಾರೆ.
ಆರೋಪಿ ಸಂದೀಪ್ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಡಕಾಯಿತಿ, ರಾಬರಿ ಸೇರಿ ಹಲವು ಪ್ರಕರಣಗಳು ಈತನ ಮೇಲಿವೆ. ಇತ್ತೀಚಿಗೆ ಕಿರಣ್ ಕುಮಾರ್ ಎಂಬುವರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿ ಸಂದೀಪ್ ಕುಮಾರ್ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.