ಬೆಂಗಳೂರು: 2018ನೇ ಸಾಲಿನ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಪಬ್ಲಿಕ್ ಟಿವಿಯ ರಾಜಕೀಯ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ವರದಿಗಾರರಾದ ಬದ್ರುದ್ದೀನ್ ಮಾಣಿ ಅವರು ಆಯ್ಕೆಯಾಗಿದ್ದಾರೆ. ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರು ಆಯ್ಕೆಯಾಗಿದ್ದಾರೆ.
ಬದ್ರುದ್ದೀನ್ ಮಾಣಿ ಸೇರಿದಂತೆ 15 ಮಂದಿ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು ಡಿಸೆಂಬರ್ 31ರಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಿದ್ದಾರೆ.
Advertisement
ಪ್ರಶಸ್ತಿ ಪುರಸ್ಕೃತರು: ಕೆ.ಎನ್ ತಿಲಕ್ ಕುಮಾರ್, ರವಿ ಹೆಗಡೆ, ಕೆ.ಎಸ್.ಸಚ್ಚಿದಾನಂದ ಮೂರ್ತಿ (ಸಚ್ಚಿ), ತಿಮ್ಮಪ್ಪ ಭಟ್, ಎ.ಬಾಲಚಂದ್ರ, ವೆಂಕಟನಾರಾಯಣ, ರಾಮಣ್ಣ ಎಚ್. ಕೋಡಿ ಹೊಸಹಳ್ಳಿ, ತುಂಗಾ ರೇಣುಕ, ಕೆ.ವಿ.ಪ್ರಭಾಕರ್, ಡಿ.ಸಿ.ನಾಗೇಶ್, ರಾಜಶೇಖರ ಹತ್ ಗುಂದಿ, ವೇದಂ ಜಯಶಂಕರ್, ರಾಜಶೇಖರ ಅಬ್ಬೂರು, ಶಿವಾಜಿ ಗಣೇಶನ್.
Advertisement
Advertisement
ಡಿಸೆಂಬರ್ 31ರಂದು ನಡೆಯುವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಚಲನಚಿತ್ರ ನಟ,ನಟಿಯರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv