ಕೃಷ್ಣ ಪಾಲಿಗೆ ಮಗನೇ ಆಗಿದ್ದ ಸಿದ್ಧಾರ್ಥ್- ಸಿದ್ದರಾಮಯ್ಯ ಬೇಸರ

Public TV
1 Min Read
SIDDARAMAIAH

ಬೆಂಗಳೂರು: ಉದ್ಯಮಿ, ಕೆಫೆ ಕಾಫಿ ಡೇ ಮಾಲೀಕರ ಸಾವಿಗೆ ಸಂತಾಪ ಸೂಚಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಸ್.ಎಂ ಕೃಷ್ಣ ಅವರ ಪಾಲಿಗೆ ಮಗನೇ ಆಗಿದ್ದ ಸಿದ್ಧಾರ್ಥ್ ಸಾವಿನಿಂದ ಆಘಾತವಾಗಿದೆ ಎಂದಿದ್ದಾರೆ.

ಸಿದ್ಧಾರ್ಥ್ ಅವರ ಸಾವಿನ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉದ್ಯಮಿ ವಿ.ಜಿ ಸಿದ್ಧಾರ್ಥ್ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕೀಡಾಗಿದ್ದೇನೆ. ತಮ್ಮ ಪಾಲಿಗೆ ಮಗನೇ ಆಗಿದ್ದ ಸಿದ್ಧಾರ್ಥ್ ಅವರ ಅಗಲಿಕೆಯಿಂದ ಎಸ್.ಎಂ.ಕೃಷ್ಣ ಮತ್ತು ಕುಟುಂಬ ವರ್ಗ ಅನುಭವಿಸುತ್ತಿರುವ ನೋವು-ಸಂಕಟಗಳನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಟ್ವೀಟ್ ಮಾಡಿದ್ದಾರೆ.

ಸೋಮವಾರ ರಾತ್ರಿ ಜಪ್ಪಿನಮೊಗರು ಎಂಬಲ್ಲಿ ನೇತ್ರಾವತಿ ನದಿಗೆ ನಿರ್ಮಿಸಿರುವ ಸೇತುವೆ ಬಳಿ ಕಾಣೆಯಾಗಿದ್ದ ಸಿದ್ಧಾರ್ಥ್, ಸುಮಾರು 36 ಗಂಟೆಗಳ ಶೋಧ ಕಾರ್ಯದ ನಂತರ ಇಂದು ಬೆಳಗ್ಗೆ ಸುಮಾರು 6.30ರ ವೇಳೆಗೆ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳೀಯ ಮೀನುಗಾರರು ಮೀನು ಹಿಡಿಯಲು ಹೋದಾಗ ಮಂಗಳೂರು- ಉಳ್ಳಾಲ ನಡುವೆ ಇರುವ ನೇತ್ರಾವತಿ ನದಿ ಸಮೀಪದ ಹೊಯಿಗೆ ಬಜಾರ್ ಎಂಬ ಪ್ರದೇಶದಲ್ಲಿ ಸಿದ್ಧಾರ್ಥ್ ಶವ ದೊರೆತಿದೆ.

Share This Article