ಬೆಂಗಳೂರು: ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿವಾದ ಮತ್ತೆ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ನಿರ್ಧಾರಕ್ಕೆ ಬಿಜೆಪಿಯಲ್ಲೇ ಅಸಮಾಧಾನ ವ್ಯಕ್ತವಾಗಿದೆ.
ಟಿಪ್ಪು ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಬಾರದು ಎಂದು ಸರ್ಕಾರ ರದ್ದು ಮಾಡಿದೆ. ಆದರೆ ಇತ್ತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜೀಂ ಸಹ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.
Advertisement
Advertisement
ಟಿಪ್ಪು ಸುಲ್ತಾನ್ ಒಬ್ಬ ರಾಜ, ಬ್ರಿಟಿಷ್ ವಿರುದ್ಧ ಹೋರಾಡಿದ ರಾಜ ಎಂದು ಅಭಿಪ್ರಾಯಿಸಿ ಖಾಸಗಿಯಾಗಿ ಟಿಪ್ಪು ಜಯಂತಿ ಆಚರಿಸೋದು ಸ್ವಾಗತ. ಆದರೆ ಶಾಂತಿ ಕದಡುತ್ತೆ ಎಂದು ಸರ್ಕಾರ ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿದೆ ಎಂದು ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಇತ್ತ ಸರ್ಕಾರದ ನಿರ್ಧಾರಕ್ಕೆ ಸೆಡ್ಡು ಹೊಡೆಯಲು ಮುಸ್ಲಿಂ ಕಾರ್ಪೋರೇಟರ್ ಗಳು ಸಜ್ಜಾಗಿದ್ದು, ಖಾಸಗಿಯಾಗಿ ಟಿಪ್ಪು ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ತಿಳಿಸಿದ್ದಾರೆ.