– ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯಿಸಿದ ವಿಪಕ್ಷ ನಾಯಕ
ಬೆಂಗಳೂರು: ರಸ್ತೆ ಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಬೆಂಗಳೂರಿನ (Bengaluru) ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ (BBMP Election) ನಡೆಸಬೇಕು ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಒತ್ತಾಯಿಸಿದರು.
Advertisement
ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆ ಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆ ಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲಾ ಕಡೆ ಕಸದ ರಾಶಿ ಕಂಡುಬರುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ – ತಿಂಗಳಾಂತ್ಯಕ್ಕೆ 27 ರಾಷ್ಟ್ರಗಳ ಆಯುಕ್ತರ ತಂಡ ಭೇಟಿ
Advertisement
Advertisement
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಈಗ ಅವರೇ ಬೆಂಗಳೂರನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದರು. ಇದನ್ನೂ ಓದಿ: ಮಲೆ ಮಹದೇಶ್ವರ ಕೋಟಿ ಒಡೆಯ – 1.94 ಕೋಟಿ ಕಾಣಿಕೆ ಸಂಗ್ರಹ
Advertisement
ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವ ಮನಸ್ಸಿಲ್ಲ. ಗ್ರೇಟರ್ ಬೆಂಗಳೂರು ರಚಿಸುತ್ತೇವೆ. ಇನ್ನಷ್ಟು ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದು ಹೇಳುತ್ತಿದೆ. ಇರುವ ನಗರವನ್ನೇ ಸುಧಾರಣೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಹೊಸ ಪ್ರದೇಶಗಳ ಅಭಿವೃದ್ಧಿ ಹೇಗೆ ಸಾಧ್ಯ. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ. ಕೆಂಪೇಗೌಡರನ್ನು ನಂಬುವ ಜನರ ಮನಸ್ಸಿಗೆ ನೋವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ: ವಿಜಯೇಂದ್ರ
ಈಗ 198 ವಾರ್ಡ್‌ಗಳಿಗೆ ಚುನಾವಣೆ ನಡೆಸಿದರೆ ಸಾಕು. ರಸ್ತೆ ಮೇಲ್ಭಾಗದಲ್ಲೇ ಸುರಂಗ ನಿರ್ಮಾಣವಾಗುತ್ತಿರುವಾಗ 150 ಅಡಿ ಕೆಳಗೆ ಸುರಂಗ ಕೊರೆಯಲು ಹೊರಟಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗಳಿಂದ ಜನರು ರೊಚ್ಚಿಗೆದ್ದಿದ್ದಾರೆ. ಬೆಂಗಳೂರು ಇಂದು ಸರಿ ಹೋಗಲಿದೆ ಎಂದು ಜನರು ಕಾಯುತ್ತಿದ್ದಾರೆ. ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ ಎಂದು ದೂರಿದರು. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯತ್ನಾಳ್ ಸ್ಪರ್ಧೆ ಇಲ್ಲ; ಹೈಕಮಾಂಡ್ ವಾರ್ನ್ ಬಳಿಕ ಭಿನ್ನರ ಶಸ್ತ್ರತ್ಯಾಗ – ಬಿವೈವಿ ಫುಲ್ ಆ್ಯಕ್ಟಿವ್
ಬೆಂಗಳೂರು ಡಾನ್, ಮಾಫಿಯಾಗಳ ಕೈಗೆ ಸಿಲುಕಿದೆ. ಮೈಸೂರು ಗಲಭೆ, ಬೆಂಗಳೂರಿನ ಬಾಂಬ್ ಬ್ಲಾಸ್ಟ್, ಅತ್ಯಾಚಾರ ಮೊದಲಾದ ಅಪರಾಧಿ ಚಟುವಟಿಕೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಜನರೇ ಸ್ವತಃ ಆತ್ಮರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಕಾಂಗ್ರೆಸ್ ನಾಯಕರು ಇನ್ನೂ ಗ್ಯಾರಂಟಿಗಳ ಗುಂಗಿನಲ್ಲೇ ಇದ್ದಾರೆ. ಕೊಲೆ, ಸುಲಿಗೆ ನಿರಂತರವಾಗಿದ್ದು, ಈ ಸರ್ಕಾರ ತೊಲಗಿದರೆ ಸಾಕು ಎಂದು ಜನರು ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ: ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ಪೋಷಕರಿಗೆ ಬಿತ್ತು 25,000 ರೂ. ದಂಡ
ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ಜವಾಬ್ದಾರಿ ವಹಿಸಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿ, ನಗರವನ್ನು ದೇವರಿಗೆ ಅರ್ಪಣೆ ಮಾಡಿದ್ದಾರೆ. ರಾಜಧಾನಿಯನ್ನು ದೇವರೇ ಕಾಪಾಡಬೇಕಿದೆ. ಬೆಂಗಳೂರಿನ ಉಸ್ತುವಾರಿಯನ್ನು ಯಾರಾದರೂ ವಹಿಸಿಕೊಳ್ಳಲಿ. ಆದರೆ ಬೆಂಗಳೂರನ್ನು ಉದ್ಧಾರ ಮಾಡುವವರು, ನಗರದ ಬಗ್ಗೆ ಜ್ಞಾನ ಇರುವವರು ಸಚಿವರಾಗಲಿ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ರೋಹಿಣಿ-ರೂಪಾ ಗಲಾಟೆ ಪ್ರಕರಣ; ಸಿಂಧೂರಿಗೆ ರಿಲೀಫ್ ನೀಡಿದ ಹೈಕೋರ್ಟ್