ಬೆಂಗಳೂರು: ಚೀನಾ (China) ಮೂಲದ ವ್ಯಕ್ತಿಗಳ ಅಣತಿಯಂತೆ ಆನ್ಲೈನ್ ಜಾಬ್ ಟಾಸ್ಕ್, ಕ್ರಿಪ್ಟೋ ಕರೆನ್ಸಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭಾಂಶ ನೀಡುವುದಾಗಿ ವಂಚಿಸುತ್ತಿದ್ದ 10 ಜನ ಆರೋಪಿಗಳನ್ನ ಬೆಂಗಳೂರು (Bengaluru) ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೈಯದ್ ಯಾಹ್ಯಾ, ಉಮರ್ ಫಾರೂಕ್, ಮೊಹಮ್ಮದ್ ಮಹೀನ್, ಮೊಹಮ್ಮದ್ ಮುಜಾಮಿಲ್, ತೇಜಸ್, ಚೇತನ್, ವಾಸೀಂ, ಸೈಯದ್ ಝೈದ್, ಸಾಹಿ ಅಬ್ದುಲ್ ಅನನ್ ಹಾಗೂ ಓಂಪ್ರಕಾಶ್ ಬಂಧಿತರು. ಆರೋಪಿಗಳ ವಿರುದ್ಧ ವಿವಿಧ ರಾಜ್ಯಗಳಲ್ಲಿ ವಂಚಿಸಿದ್ದ ಆರೋಪದಡಿ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ (ಎನ್ಸಿಆರ್ಪಿ) ನಲ್ಲಿ ಒಟ್ಟು 122 ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ರದ್ದು, ಒಪಿಎಸ್ ಜಾರಿ: ನಾಸಿರ್ ಹುಸೇನ್
Advertisement
ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ವ್ಯಕ್ತಿಗಳನ್ನ ಸಂಪರ್ಕಿಸುತ್ತಿದ್ದ ಆರೋಪಿಗಳು, ಮನೆಯಲ್ಲಿಯೇ ಕುಳಿತು ನಾವು ನೀಡುವ ಟಾಸ್ಕ್ಗಳನ್ನ ಆನ್ಲೈನ್ನಲ್ಲಿ ಪೂರ್ಣಗೊಳಿಸಿದರೆ ಹಣ ನೀಡುವುದಾಗಿ ನಂಬಿಸುತ್ತಿದ್ದರು. ಒಪ್ಪಿಗೆ ಸೂಚಿಸುವವರನ್ನ ತಮ್ಮದೇ ಆದ ಟೆಲಿಗ್ರಾಂ ಗ್ರೂಪ್ಗೆ ಸೇರಿಸಿ, ಆರಂಭದಲ್ಲಿ ನಾವು ಹೇಳುವ ಕೆಲ ಐಷಾರಾಮಿ ಹೋಟೆಲ್ಗಳಿಗೆ ರಿವ್ಯೂಗಳನ್ನ ನೀಡಬೇಕು. ಮತ್ತು ಈ ರೀವ್ಯೂಗಳನ್ನ ನೀಡುವ ಸಮಯದಲ್ಲಿ ನೀವು 150-200 ರೂ. ಪಾವತಿಸಿ ರಿವ್ಯೂ ರಿಪೋರ್ಟ್ ನೀಡಿದರೆ ಲಾಭಾಂಶ ನೀಡುತ್ತೇವೆ ಎನ್ನುತ್ತಿದ್ದರು. ಇದನ್ನೂ ಓದಿ: ಮಹಾಲಕ್ಷ್ಮಿ ಕೊಲೆ ಬಳಿಕ ಬೆಂಗಳೂರಿನಿಂದ ಒಡಿಶಾಗೆ ಬೈಕ್ನಲ್ಲೇ ಪ್ರಯಾಣ – ಮೂರು ದಿನ 1,550 ಕಿಮೀ ಬೈಕ್ ಓಡಿಸಿದ್ದ ಹಂತಕ!
Advertisement
Advertisement
ಅದೇ ರೀತಿ ಆರಂಭದಲ್ಲಿ ಪ್ರತೀ ರಿವ್ಯೂಗೆ 400-500 ರೂಪಾಯಿ ಹಣವನ್ನ ಆನ್ಲೈನ್ ಮೂಲಕ ಪಾವತಿಸುತ್ತಿದ್ದರು. ಈ ರೀತಿ ಹಲವು ರಿವ್ಯೂ ರಿಪೋರ್ಟ್ಗಳನ್ನ ತರಿಸಿಕೊಂಡು ಹಣ ಪಾವತಿಸಿ ನಂಬಿಕೆ ಗಳಿಸಿಕೊಂಡ ಬಳಿಕ ಕ್ರಿಪ್ಟೋ ಕರೆನ್ಸಿ (Cryptocurrency) ಟ್ರೇಡಿಂಗ್ನಲ್ಲಿ ಹೆಚ್ಚು ಹಣ ಹೂಡಿಕೆ ಮಾಡಿದರೆ ಇನ್ನೂ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸುತ್ತಿದ್ದರು. ನಂಬಿದವರು ಹಣ ಹೂಡಿಕೆ ಮಾಡಿದ ಬಳಿಕ ಸಂಪರ್ಕಕ್ಕೆ ಸಿಗದೆ ವಂಚಿಸುತ್ತಿದ್ದರು. ಇದೇ ರೀತಿ ವ್ಯಕ್ತಿಯೊಬ್ಬರಿಗೆ 25.37 ಲಕ್ಷ ರೂ. ವಂಚಿಸಿದ್ದ ಆರೋಪಿಗಳ ವಿರುದ್ಧ ಉತ್ತರ ವಿಭಾಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯರಾಗಿ ಭಾರತವನ್ನು ಸೇರಿಸಿ: ಫ್ರಾನ್ಸ್ ಅಧ್ಯಕ್ಷ ಒತ್ತಾಯ
Advertisement
ತನಿಖೆ ಕೈಗೊಂಡ ಪೊಲೀಸರು ಹಣ ಸಂದಾಯವಾಗಿರುವ ಬ್ಯಾಂಕ್ ಖಾತೆಗಳ ವಿವರ ಹಾಗೂ ಆ ಖಾತೆಗಳಿಂದ ಬೆಂಗಳೂರಿನ ವಿವಿಧ ಎಟಿಎಂಗಳಲ್ಲಿ ವಿತ್ ಡ್ರಾ ಆಗಿರುವುದನ್ನ ಪತ್ತೆಹಚ್ಚಿದ್ದರು. ಅದರನ್ವಯ 7 ಜನ ಆರೋಪಿಗಳನ್ನ ಆರ್.ಟಿ.ನಗರದ ಬಳಿ ಬಂಧಿಸಿ ವಿಚಾರಣೆ ನಡೆಸಿದಾಗ, ಆರೋಪಿಗಳ ಪೈಕಿ ಇನ್ನೂ ಮೂವರು ಚೀನಾಗೆ ತೆರಳಿರುವುದು ಹಾಗೂ ಚೀನಾ ಮೂಲದ ವ್ಯಕ್ತಿಗಳ ಸೂಚನೆಯಂತೆ ವಂಚನೆಯಲ್ಲಿ ತೊಡಗಿರುವುದನ್ನ ಬಾಯ್ಬಿಟ್ಟಿದ್ದರು. ಸೆ.15ರಂದು ಚೀನಾದಿಂದ ಬಂದಿಳಿದ ಮೂವರೂ ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಒಟ್ಟು 10 ಜನರನ್ನೂ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಇದನ್ನೂ ಓದಿ: ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿ 91 ಲಕ್ಷ ರೂ. ಕಳೆದುಕೊಂಡ ಖಾಸಗಿ ಶಾಲಾ ಶಿಕ್ಷಕ
ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ 72 ಮೊಬೈಲ್ ಫೋನ್ಗಳು, 182 ಡೆಬಿಟ್ ಕಾರ್ಡ್ಗಳು, 2 ಲ್ಯಾಪ್ ಟಾಪ್ಗಳು, ವಿವಿಧ ಕಂಪನಿಯ 133 ಸಿಮ್ ಕಾರ್ಡ್ಗಳು, 127 ಬ್ಯಾಂಕ್ ಪಾಸ್ ಬುಕ್ ಮತ್ತು 1.74 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ನ್ಯಾಷನಲ್ ಸೈಬರ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ ಮೂಲಕ ಆಂಧ್ರಪ್ರದೇಶ, ಆಸ್ಸಾಂ, ಚಂಡೀಗಡ, ಹರಿಯಾಣ, ಹಿಮಾಚಲ ಪ್ರದೇಶ, ಬಿಹಾರ, ಛತ್ತಿಸ್ಘಡ್, ದೆಹಲಿ, ಗುಜರಾತ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ತಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧೆಡೆ ಒಟ್ಟು 122 ಪ್ರಕರಣಗಳು ದಾಖಲಾಗಿದ್ದವು. ಆರೋಪಿಗಳ ಬಳಿ ಸಿಕ್ಕ ಬ್ಯಾಂಕ್ ಪಾಸ್ ಬುಕ್ ಆಧಾರದಲ್ಲಿ ಆಯಾ ಖಾತೆಗಳಲ್ಲಿದ್ದ ಒಟ್ಟು 7.34 ಲಕ್ಷ ರೂ. ಫ್ರೀಜ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಿಮ್ಮಿಂದ ನಮ್ಮ ಸಿದ್ದರಾಮಯ್ಯಗೆ ಈ ಸ್ಥಿತಿ ಬಂತು – ಮುಡಾ ಅಧ್ಯಕ್ಷರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್