ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘಟನೆಯ ಅಧ್ಯಕ್ಷ ಕೆಂಪಣ್ಣ (Kempanna) ನೇತೃತ್ವದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದೆ. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಗಳ ಬಾಕಿ ಇರುವ ಬಿಲ್‍ಗಳನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ ಅವರು ಬಾಕಿ ಇರುವ ಬಿಲ್‍ಗಳ ವಿಚಾರವಾಗಿ ಸಿಎಂ ಭೇಟಿಯಾಗಿದ್ದೇವೆ. ಮುಖ್ಯಮಂತ್ರಿಗಳು ಬಿಲ್‍ಗಳನ್ನು ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ಹಿಂದಿನ ಸರ್ಕಾರದ ಕಮಿಷನ್ ಆರೋಪ ಬಗ್ಗೆ ನಾವು ಈಗ ಚರ್ಚೆ ಮಾಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಾವಿನಲ್ಲೂ ಶತಕ ಬಾರಿಸಿದ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ಹೈವೇ : ಅಪಘಾತಕ್ಕೆ ಕಾರಣ ಏನು?
Advertisement
ಬಜೆಟ್ ಅಧಿವೇಶನದ ನಂತರ ಬಾಕಿ ಮೊತ್ತ ಬಿಡುಗಡೆಗೆ ಪರಿಶೀಲಿಸುದಾಗಿ ಸಿಎಂ ಭರವಸೆ ನೀಡಿದ್ದಾರೆ. ಅಲ್ಲದೇ ನಮ್ಮ ಸರ್ಕಾರದ ಅವಧಿಯಲ್ಲಿ ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕಲಾಗುತ್ತದೆ. ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಈ ವೇಳೆ ಬಿಬಿಎಂಪಿಯಲ್ಲಿ 2000 ಕೋಟಿ ರೂ. ಹಾಗೂ ಅಮೃತ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.ಗಳು ಬಾಕಿ ಇರುವುದಾಗಿ ಅವರು ತಿಳಿಸಿದ್ದಾರೆ.
Advertisement
ಕಾಂಗ್ರೆಸ್ (Congress) ಸರ್ಕಾರದ ಸಚಿವರು ಕಮಿಷನ್ ಫಿಕ್ಸ್ ಮಾಡಿಕೊಂಡಿದ್ದಾರೆ ಎಂಬ ಬಿಜೆಪಿ (BJP) ಆರೋಪಕ್ಕೆ ಇದುವರೆಗೂ ಕಾಂಗ್ರೆಸ್‍ನಲ್ಲಿ ಯಾರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ. ಯಾರಾದರೂ ಸಚಿವರು, ಶಾಸಕರು ನಮ್ಮ ಬಳಿ ಕಮಿಷನ್ ಕೇಳಿದರೆ ಅದನ್ನು ಸಹ ಬಹಿರಂಗಪಡಿಸ್ತೇವೆ. ಯಾರೇ ಕಮಿಷನ್ ಕೇಳಿದರೂ ಅದನ್ನು ನಾವು ವಿರೋಧಿಸುತ್ತೇವೆ ಎಂದಿದ್ದಾರೆ.
Advertisement
Advertisement
ಬಿಜೆಪಿ ಮೇಲಿನ 40% ಕಮಿಷನ್ ಆರೋಪದ ದಾಖಲಾತಿ ಬಿಡುಗಡೆ ಆಗದ ವಿಚಾರದ ಬಗ್ಗೆ, ಪ್ರಕರಣ ಸದ್ಯ ಕೋರ್ಟ್‍ನಲ್ಲಿದೆ. ಅದರ ಕುರಿತ ದಾಖಲಾತಿಗಳನ್ನು ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ. 40% ಕಮಿಷನ್ ವಿಚಾರವಾಗಿ ಸಿಎಂ ಬಳಿ ಏನು ಚರ್ಚಿಸಬೇಕೋ ಅದನ್ನು ಚರ್ಚಿಸಲಾಗಿದೆ. ಅದರ ಬಗ್ಗೆ ಈಗ ನಾನು ಮಾತಾಡುವುದಿಲ್ಲ. ಯಾವುದೇ ಕಾರಣಕ್ಕೂ ಆ ವಿಚಾರದಲ್ಲಿ ನಾವು ಸಾಫ್ಟ್ ಆಗಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕೆಂಪಣ್ಣ ಈಗ ಎಲ್ಲಿ ಹೋಗಿದ್ದಾರೆ? ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರ (Basavaraj Bommai) ಹೇಳಿಕೆ ವಿಚಾರಕ್ಕೆ, ಮೂರು ವರ್ಷಗಳ ಕಾಲ ಅವರ ಸರ್ಕಾರದ ಬಗ್ಗೆ ನಾವು ಹೋರಾಟ ಮಾಡಿದ್ದೇವೆ. ಆಗ ಬೊಮ್ಮಾಯಿ ಸಿಎಂ ಆಗಿದ್ದರು. ಆಗ ಯಾಕೆ ಸುಮ್ಮನೆ ಇದ್ರು? ಯಾಕೆ ತನಿಖೆ ಮಾಡಿಸಲಿಲ್ಲ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್ ಮೇಲಿಂದ ಬಿದ್ದು ಮಹಿಳೆ ಸಾವು