Connect with us

ಗ್ಯಾಂಗ್ ರೇಪ್ ಪ್ರಕರಣ- ಮೂವರು ಆರೋಪಿಗಳು ಹದಿನಾಲ್ಕು ದಿನ ಪೊಲೀಸ್ ಕಸ್ಟಡಿಗೆ

ಗ್ಯಾಂಗ್ ರೇಪ್ ಪ್ರಕರಣ- ಮೂವರು ಆರೋಪಿಗಳು ಹದಿನಾಲ್ಕು ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಬಾಂಗ್ಲಾದೇಶ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಹದಿನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ವಸಂತ ನಗರದ ವರ್ಚುವಲ್ ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಪ್ರಕರಣದ ಗಂಭೀರತೆ, ಆರೋಪಿಗಳಿಂದ ಇನ್ನೂ ಸಾಕಷ್ಟು ಮಾಹಿತಿ ಕಲೆಹಾಕುವ ದೃಷ್ಟಿಯಿಂದ ಮೂವರನ್ನು ಹದಿನಾಲ್ಕು ದಿನಗಳ ಕಾಲ ಕಸ್ಟಡಿಗೆ ನೀಡಿ ಹತ್ತನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಇದೇ ವೇಳೆ ಮತ್ತೋರ್ವ ಆರೋಪಿ ಕೊರೊನಾ ಪಾಸಿಟಿವ್ ಆಗಿದೆ ಅಂತಾ ಪೊಲೀಸರ ಮುಂದೆ ಹೈಡ್ರಾಮಾ ಮಾಡಿದ್ದ. ಹಾಗಾಗಿ ಆ ಆರೋಪಿಗೆ ಠಾಣೆಯಲ್ಲೇ ಆರ್ ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

ಇದೇ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡುವ ವೇಳೆ ಪ್ರಮುಖ ಇಬ್ಬರು ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಕಾಲಿಗೆ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದಾರೆ. ಸದ್ಯ ಯುವತಿ ಮೇಲೆ ಗ್ಯಾಂಗ್‍ರೇಪ್ ಸಂಬಂಧ ಇಬ್ಬರು ಮಹಿಳೆಯರು ಸೇರಿ ಆರು ಜನರನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ನಂತರ ಯುವತಿ ಕೇರಳದ ಸಂಬಂಧಿಕರ ಮನೆಯಲ್ಲಿ ವಾಸವಿರುವ ಮಾಹಿತಿ ಲಭ್ಯವಾಗಿದೆ. ಪೊಲೀಸರ ತಂಡ ಸಂತ್ರಸ್ತ ಯುವತಿಯ ಬಳಿ ಹೇಳಿಕೆ ಪಡೆಯಲು ಮುಂದಾಗಿದೆ.

ಏನಿದು ಪ್ರಕರಣ?
ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟೆಲ್ ಇರಿಸಿ ಕಾಮುಕರು ವಿಕೃತಿ ಮರೆದಿದ್ದಾರೆ. ವೀಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ವರು ಕಾಮುಕರಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಅತ್ಯಾಚಾರ ಪ್ರಕರಣ- ಕಾಮುಕರ ಕಾಲಿಗೆ ಗುಂಡು ಹೊಡೆದ ಪೊಲೀಸರು

ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳು. ಆರೋಪಿಗಳು ಬಾಂಗ್ಲಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಸಂತ್ರಸ್ಥೆ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ನಲ್ಲಿ ವಾಸವಾಗಿದ್ದರು. ಯುವತಿಯನ್ನು ಅತ್ಯಾಚಾರಗೈದು, ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಯನ್ನು ಕಿರಾತಕರು ವೀಡಿಯೋ ಮಾಡಿದ್ದಾರೆ. ಯುವತಿಯ ಮೇಲೆ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ಅತ್ಯಾಚಾರದ ವೀಡಿಯೋ ವೈರಲ್ ಆಗಿತ್ತು. ಅಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಅಸ್ಸಾಂ ರಾಜ್ಯದ ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ವೀಡಿಯೋದಲ್ಲಿ ಬಾಂಗ್ಲಾ ಪ್ರಜೆಗಳು ಭಾಗಿಯಾಗಿದ್ದರಿಂದ ಅಲ್ಲಿನ ಪೊಲೀಸರಿಗೂ ಮಾಹಿತಿ ರವಾನಿಸಲಾಗಿತ್ತು. ಆ ಬಳಿಕ ಬಾಂಗ್ಲಾ ಪೊಲೀಸರು ಸಂತ್ರಸ್ತೆಯ ಕುಟುಂಬಸ್ಥರನ್ನ ಪತ್ತೆ ಮಾಡಿದ್ದಾರೆ. ಆ ನಂತರ ಘಟನೆ ಬೆಂಗಳೂರಿನಲ್ಲಿ ನಡೆದಿರೋದು ಬಗ್ಗೆ ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗ್ಳೂರಿನಲ್ಲೊಂದು ನಿರ್ಭಯಾ ಪ್ರಕರಣ – ಅತ್ಯಾಚಾರಗೈದು ಗುಪ್ತಾಂಗಕ್ಕೆ ಬಾಟಲ್ ಇರಿಸಿ ವಿಕೃತಿ!

Advertisement
Advertisement