ನವದೆಹಲಿ: ಬಾಂಗ್ಲಾದೇಶದಲ್ಲಿ (Bangladesh) ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿ ಢಾಕಾ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿಯವರ (Chinmoy Das) ಜಾಮೀನು ಅರ್ಜಿಯನ್ನು ನ್ಯಾಯಾಲಯ (Court) ತಿರಸ್ಕರಿಸಿದೆ.
ಜಾಮೀನು ಕೋರಿ ಚಟ್ಟೋಗ್ರಾಮ್ ನ್ಯಾಯಾಲಯಕ್ಕೆ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅರ್ಜಿ ಸಲ್ಲಿಸಿದ್ದರು. ಢಾಕಾದಿಂದ ಬಂದಿದ್ದ ಸುಪ್ರೀಂಕೋರ್ಟ್‌ನ 11 ವಕೀಲರ ತಂಡವು ಅರ್ಧಗಂಟೆಗೂ ಹೆಚ್ಚು ಕಾಲ ವಾದ ಮಂಡಿಸಿದ್ದರು. ಎರಡೂ ಕಡೆಯ ವಾದವನ್ನು ಆಲಿಸಿದ ನಂತರ ನ್ಯಾಯಾಧೀಶ ಎಂ.ಡಿ ಸೈಫುಲ್ ಇಸ್ಲಾಂ ಅವರಿದ್ದ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
Advertisement
ನಾವು ನ್ಯಾಯಾಲಯದ ಮುಂದೆ ನಮ್ಮ ವಾದವನ್ನು ಮಂಡಿಸಿದ್ದೇವೆ. ಆದರೆ ಪ್ರಾಸಿಕ್ಯೂಷನ್ ಜಾಮೀನನ್ನು ವಿರೋಧಿಸಿತು. ಈ ಹಿನ್ನಲೆ ನ್ಯಾಯಾಲಯವು ಜಾಮೀನು ತಿರಸ್ಕರಿಸಿದೆ. ನಾವು ಉನ್ನತ ನ್ಯಾಯಾಲಯಕ್ಕೆ ತೆರಳಿ ಮುಂದಿನ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಬಾಂಗ್ಲಾದೇಶದ ಮಾಜಿ ಡೆಪ್ಯುಟಿ ಅಟಾರ್ನಿ ಜನರಲ್ ಅಪುರ್ಬಾ ಕುಮಾರ್ ಭಟ್ಟಾಚಾರ್ಯ ತಿಳಿಸಿದ್ದಾರೆ.
Advertisement
Advertisement
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತದ ಸರ್ಕಾರ ಪತನದ ನಂತರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ವ್ಯಾಪಕ ದಾಳಿ ನಡೆಯುತ್ತಿದೆ. ಇದರ ವಿರುದ್ಧ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಹಿಂದೂಗಳ ಪರ ಧ್ವನಿ ಎತ್ತಿದ್ದರು.
Advertisement
ದಾಸ್ ಅವರನ್ನು ಢಾಕಾ ಪೊಲೀಸ್ ಡಿಟೆಕ್ಟಿವ್ ಬ್ರಾಂಚ್ ನ.25 ರಂದು ದೇಶದ್ರೋಹದ ಆರೋಪದಡಿ ಬಂಧಿಸಿತ್ತು. ದಾಸ್ ಬಂಧನದ ನಂತರ ಅವರ ಜಾಮೀನು ಅರ್ಜಿಯನ್ನು ಚಿತ್ತಗಾಂಗ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ನ.26 ರಂದು ತಿರಸ್ಕರಿಸಿತ್ತು. ನ.29 ರಂದು ದಾಸ್ ಅವರನ್ನು ಜೈಲಿನಲ್ಲಿ ಭೇಟಿಯಾಗಲು ಹೋದ ಇಬ್ಬರು ಸನ್ಯಾಸಿಗಳನ್ನು ಸಹ ಜೈಲಿಗೆ ಹಾಕಲಾಗಿದೆ.