ನವದೆಹಲಿ: ಏಷ್ಯಾದ್ಯಂತ ಬಾಂಗ್ಲಾದೇಶದ ರಫ್ತಿಗೆ ಭಾರತವೇ ಅತ್ಯಂತ ದೊಡ್ಡ ಮಾರುಕಟ್ಟೆಯಾಗಿದೆ. ಈ ಪ್ರಗತಿಯನ್ನು ಮತ್ತಷ್ಟು ವೇಗಗೊಳಿಸಲು ನಾವು ಶೀಘ್ರವೇ ದ್ವಿಪಕ್ಷೀಯ ಆರ್ಥಿಕ ಸಮಗ್ರ ಪಾಲುದಾರಿಕೆಗೆ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು 4 ದಿನಗಳ ಭಾರತದ ಪ್ರವಾಸದಲ್ಲಿದ್ದು, ಇಂದು ಅವರು ರಾಷ್ಟ್ರಪತಿ ಭವನದ ಮುಂಭಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ಮಾತನಾಡಿದ ಮೋದಿ, ಭಾರತ ಹಾಗೂ ಬಾಂಗ್ಲಾದೇಶದ ಸಂಬಂಧ ಮುಂದಿನ ದಿನಗಳಲ್ಲಿ ಎತ್ತರಕ್ಕೆ ಸಾಗುತ್ತದೆ ಎಂದು ಹೇಳಿದರು.
Advertisement
Advertisement
ಭಾರತ ಹಾಗೂ ಬಾಂಗ್ಲಾದೇಶದ ನಡುವಿನ ವ್ಯಾಪಾರ ವೇಗವಾಗಿ ಹೆಚ್ಚುತ್ತಿದೆ. ನಾವು ಐಟಿ, ಬಾಹ್ಯಾಕಾಶ ಹಾಗೂ ಪರಮಾಣು ವಲಯಗಳಲ್ಲಿ ಸಹಕಾರಗಳನ್ನು ವಿಸ್ತರಿಸಲು ನಿರ್ಧರಿಸಿದ್ದೇವೆ. ವಿದ್ಯುತ್ ಪ್ರಸರಣ ಮಾರ್ಗಗಳ ಕುರಿತು ಉಭಯ ದೇಶಗಳ ನಡುವೆ ಮಾತುಕತೆ ನಡೆಯುತ್ತಿದೆ ಎಂದು ಮೋದಿ ಮಾಹಿತಿ ನೀಡಿದರು. ಇದನ್ನೂ ಓದಿ: ಮೂಗಿನ ಮೂಲಕ ನೀಡುವ ಭಾರತದ ಮೊದಲ ಕೋವಿಡ್-19 ಲಸಿಕೆಗೆ ಡಿಸಿಜಿಐ ಅನುಮೋದನೆ
Advertisement
ನೀರು ಹಂಚಿಕೆ ಕುರಿತ ಪ್ರಮುಖ ದಾಖಲೆಗಳಿಗೆ ಇಬ್ಬರೂ ನಾಯಕರು ಸಹಿ ಹಾಕಿ, 54 ನದಿಗಳು ಭಾರತ-ಬಾಂಗ್ಲಾದೇಶ ಗಡಿಯ ಮೂಲಕ ಹರಿಯುತ್ತವೆ. ಇದು ಎರಡೂ ದೇಶಗಳ ಜನರ ಜೀವನೋಪಾಯಕ್ಕೆ ಸಂಬಂಧಿಸಿವೆ. ಇಂದು ನಾವು ಕುಶಿಯಾರಾ ನದಿಯ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ ಎಂದು ಮೋದಿ ಹೇಳಿದರು.
Advertisement
Addressing joint press meet with Bangladesh PM Sheikh Hasina. https://t.co/6bnJ1zjwVF
— Narendra Modi (@narendramodi) September 6, 2022
ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರವಾಹ ಪರಿಸ್ಥಿತಿ, ಭಯೋತ್ಪಾದನೆ, ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿದರು. ಇದನ್ನೂ ಓದಿ: ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ