ಢಾಕಾ: ಬಾಂಗ್ಲಾದೇಶದ (Bangladesh) ರಾಜಧಾನಿ ಢಾಕಾದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ಸೆಕ್ರೆಟರಿಯೇಟ್ ಬಳಿ ಭಾನುವಾರ ರಾತ್ರಿ ವಿದ್ಯಾರ್ಥಿಗಳು ಮತ್ತು ಅನ್ಸಾರ್ ಸದಸ್ಯರ ನಡುವೆ ಹಿಂಸಾತ್ಮಕ ಘರ್ಷಣೆಗಳು (Clash At Secretariat) ಸಂಭವಿಸಿವೆ.
ರಾತ್ರಿ 9 ಗಂಟೆಯ ನಂತರ ಘರ್ಷಣೆ ಆರಂಭವಾಗಿದ್ದು, ಎರಡೂ ಕಡೆಯ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನ್ಸರ್ ಸದಸ್ಯರು ನಿರಂಕುಶ ಪ್ರಭುತ್ವದ ಏಜೆಂಟ್‌ಗಳು ಎಂದು ವಿದ್ಯಾರ್ಥಿಗಳು ಕರೆದಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ – ಇಬ್ಬರು ಐಜಿಪಿಗಳ ನೇತೃತ್ವದಲ್ಲಿ ತನಿಖಾ ತಂಡ ರಚನೆ
Advertisement
Ansar members, many of them with sticks in hands, are seen beating students during a clash tonight. Students from Dhaka University rushed to the secretariat following a Facebook post from Hasnat Abdullah, one of the coordinators of the Anti-Discrimination Student Movement. pic.twitter.com/Lwh2lg9n4f
— The Business Standard (@tbsnewsbd) August 25, 2024
Advertisement
ಬಾಂಗ್ಲಾದೇಶದಲ್ಲಿ ಆಂತರಿಕ ಭದ್ರತೆ ನೀಡುತ್ತಿರುವ ಅನ್ಸಾರ್ ಸದಸ್ಯರು (Ansar Members) ನಮ್ಮ ಉದ್ಯೋಗವನ್ನು ರಾಷ್ಟ್ರೀಕರಣಗೊಳಿಸಬೇಕೆಂದು ಕೆಲ ತಿಂಗಳಿನಿಂದ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆ ಸಂಬಂಧ ಸಭೆ ನಡೆಯುತ್ತಿರುವಾಗ ಹಿಂಸಾಚಾರ ನಡೆದಿದೆ. ಇದನ್ನೂ ಓದಿ: ದರ್ಶನ್ ಜೊತೆ ಕುಳಿತ ನಟೋರಿಯಸ್ ರೌಡಿಶೀಟರ್‌ಗಳು ಯಾರು?
Advertisement
ವಿದ್ಯಾರ್ಥಿಗಳು ಪ್ರತಿಭಟಿಸಿದ್ದು ಯಾಕೆ?
ಬಾಂಗ್ಲಾದೇಶದಲ್ಲಿ ಸುಮಾರು 60 ಲಕ್ಷ ಅನ್ಸಾರ್ ಸದಸ್ಯರಿದ್ದಾರೆ. ಇವರು ದೇಶದ ಒಳಗ ಕಾನೂನು ಸುವ್ಯವಸ್ಥೆಯನ್ನು ನೋಡಿಕೊಳ್ಳುತ್ತಾರೆ. ಈ ಅನ್ಸಾರ್ ಸದಸ್ಯರು ಶೇಖ್ ಹಸೀನಾ ಅವರ ಅವಾಮಿ ಲೀಗ್‌ನ ಏಜೆಂಟ್‌ಗಳು. ಶೇಖ್ ಹಸೀನಾ ಅಣತಿಯಂತೆ ನಮ್ಮ ಮೇಲೆ ಇವರಿಂದ ಹಲ್ಲೆ ನಡೆದಿದೆ ಎಂದು ವಿದ್ಯಾರ್ಥಿಗಳು ದೂರುತ್ತಿದ್ದಾರೆ.
Advertisement
ಭಾನುವಾರ ರಾತ್ರಿ 8:35ಕ್ಕೆ ವಿದ್ಯಾರ್ಥಿ ಆಂದೋಲನದ ಸಂಯೋಜಕ ಹಸ್ನತ್ ಅವರು, ಢಾಕಾ ವಿಶ್ವವಿದ್ಯಾಲಯದ ರಾಜು ಸ್ಮಾರಕ ಶಿಲ್ಪಕಲೆ ಬಳಿ ಜಮಾಯಿಸುವಂತೆ ಫೇಸ್‌ಬುಕ್ ಪೋಸ್ಟ್ ಮೂಲಕ ಕೇಳಿಕೊಂಡಿದ್ದಾರೆ. ಅನ್ಸಾರ್ ಸದಸ್ಯರ ಹಲವು ಬೇಡಿಕೆಗಳನ್ನು ಈಡೇರಿಸಿದರೂ ಅವರು ನಮ್ಮ ಸದಸ್ಯರನ್ನು ಸೆಕ್ರೆಟರಿಯೇಟ್‌ನಲ್ಲಿ ವಶದಲ್ಲಿ ಇರಿಸಿದ್ದಾರೆ ಎಂದು ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ನೋಡಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಮಾವಣೆಯಾಗಿದ್ದರಿಂದ ಮತ್ತೆ ಘರ್ಷಣೆ ನಡೆದಿದೆ.