ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆ (Waqf Amendment Act) ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಈ ಬೆಳವಣಿಗೆ ಹಿಂದೆ ಬಾಂಗ್ಲಾದೇಶ (Bangladesh) ಮೂಲದ ದುಷ್ಕರ್ಮಿಗಳ ಕೈವಾಡ ಇರಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್ ನಾಯಕರಿಂದ ಬೆಂಬಲ ಹೊಂದಿರುವ ದುಷ್ಕರ್ಮಿಗಳು ಹಿಂಸಾಚಾರ ಆರಂಭಿಸಿದ್ದು, ನಂತರ ಅವರು ಪರಿಸ್ಥಿತಿಯ ಮೇಲೆ ನಿಯಂತ್ರಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಸರಣಿ ಹಿಂಸಾಚಾರದ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವಾಲಯ, ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್‌ನ (Murshidabad) 3 ಗಡಿ ಪ್ರದೇಶಗಳಿಗೆ ಹೆಚ್ಚುವರಿ ಅರೆಸೈನಿಕ ಪಡೆಗಳನ್ನು ನಿಯೋಜಿಸಿದೆ. ಈ ನಡುವೆ ಜೀವ ಮತ್ತು ಆಸ್ತಿಯನ್ನು ರಕ್ಷಿಸುವಲ್ಲಿ ವಿಫಲವಾದ ಬಗ್ಗೆ, ರೈಲ್ವೆ ಮೂಲಸೌಕರ್ಯದ ಮೇಲಿನ ದಾಳಿಯ ವರದಿ ಮತ್ತು ಅಶಾಂತಿಯ ಆರಂಭಿಕ ಹಂತದಲ್ಲಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ಕೇಂದ್ರವು ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರಣೆಯನ್ನು ಕೇಳಿದೆ. ಇದನ್ನೂ ಓದಿ: ಗಲಭೆಕೋರರಿಗೆ ದಂಡವೇ ಒಳ್ಳೆ ಚಿಕಿತ್ಸೆ: ಬಂಗಾಳ ಹಿಂಸಾಚಾರಕ್ಕೆ ಯೋಗಿ ಆದಿತ್ಯನಾಥ್ ಕಿಡಿ
ಕೋಲ್ಕತ್ತಾ ಹೈಕೋರ್ಟ್ (Calcutta Highcourt) ಕೂಡ ಪಶ್ಚಿಮ ಬಂಗಾಳ ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸಿದ ರೀತಿಯನ್ನು ಟೀಕಿಸಿತು. ಈ ಹಿಂದೆ ಕೇಂದ್ರ ಪಡೆಗಳನ್ನು ನಿಯೋಜಿಸಿದ್ದರೇ ಹಿಂಸಾಚಾರವನ್ನು ತಡೆಯಬಹುದಿತ್ತು ಎಂದು ಹೇಳಿದೆ. ನಂತರ ನ್ಯಾಯಾಲಯವು ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ತಕ್ಷಣ ಕೇಂದ್ರ ಪಡೆಗಳನ್ನು ನಿಯೋಜಿಸಲು ಖಚಿತಪಡಿಸಿಕೊಳ್ಳಲು ಆದೇಶಿಸಿದೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಬಂದು ಜಡ್ಜ್ ಮನೆಯಲ್ಲಿ ಕಳ್ಳತನ – 8 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಗಳು ಅರೆಸ್ಟ್
ಈ ಹಿಂಸಾಚಾರದಲ್ಲಿ ತಂದೆ-ಮಗ ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಅಶಾಂತಿಯು ಹಲವಾರು ಹಿಂದೂ ಕುಟುಂಬಗಳನ್ನು ಸ್ಥಳಾಂತರಿಸುವಂತೆ ಮಾಡಿದೆ. ಅವರಲ್ಲಿ ಹಲವರು ಮಾಲ್ಡಾಗೆ ಪಲಾಯನ ಮಾಡಿದ್ದಾರೆ ಎಂದು ವರದಿಯಾಗಿದೆ. ಇದು ಗಡಿಯಲ್ಲಿ ಹೊಸ ಒಳನುಸುಳುವಿಕೆ ಮತ್ತು ಕೋಮು ಅಶಾಂತಿಯ ಭಯವನ್ನು ಹುಟ್ಟುಹಾಕಿದೆ. ಇದನ್ನೂ ಓದಿ: ವರದಿಯೇ ಹೊರಗೆ ಬಾರದೇ ಜಾತಿಗಣತಿ ವಿರೋಧ ಮಾಡೋದು ಸರಿಯಲ್ಲ: ಸಂತೋಷ್ ಲಾಡ್
ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಅಧಿಕಾರಿಗಳು ಮುರ್ಷಿದಾಬಾದ್‌ನ ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಪೊಲೀಸ್ ದಾಳಿಗಳು ಮುಂದುವರೆದಿದ್ದು, ಇದುವರೆಗೆ ಹಲವಾರು ಸ್ಥಳಗಳಲ್ಲಿ 150ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಇದನ್ನೂ ಓದಿ: Chitradurga | ಗಂಜಲಗುಂಟೆ ಗ್ರಾಮದಲ್ಲಿ 3 ತಿಂಗಳಿಂದ ನೀಗದ ನೀರಿನ ಬವಣೆ – ಗ್ರಾಮಸ್ಥರು ಕಂಗಾಲು
ಹೆಚ್ಚಿನ ಅಶಾಂತಿಯನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಪಡೆಗಳು ಸ್ಥಳದಲ್ಲಿವೆ. ಆದರೆ ಪ್ರತಿಭಟನೆಗಳ ಹಿಂದಿನ ಕುಂದು-ಕೊರತೆಗಳನ್ನು ಪರಿಹರಿಸಲು ಆಡಳಿತಾತ್ಮಕ ಮತ್ತು ರಾಜಕೀಯ ಪ್ರಯತ್ನಗಳು ಮುಂದುವರೆದಿವೆ.