ನವದೆಹಲಿ: ಸೆಂಟ್ರಲ್ ದೆಹಲಿಯ ಐಜಿಐ ಸ್ಟೇಡಿಯಂ ಬಳಿ ಬ್ಯಾಂಕ್ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 28 ವರ್ಷದ ಆಟೋ ರಿಕ್ಷಾ ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಗೋಪಾಲ್ ಎಂದು ಗುರುತಿಸಲಾಗಿದ್ದು, ಈತ ನ್ಯೂ ಕರ್ದಂಪುರಿ ನಿವಾಸಿಯಾಗಿದ್ದಾನೆ. ಮಹಿಳೆ ಪಶ್ಚಿಮ ಉತ್ತರ ಪ್ರದೇಶದ ಬ್ಯಾಂಕ್ನಲ್ಲಿ ಸಹಾಯಕ ಜನರಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ದೆಹಲಿಯಲ್ಲಿ ತನ್ನ ಪೋಷಕರೊಂದಿಗೆ ಉಳಿದುಕೊಂಡಿದ್ದಾರೆ. ಸೋಮವಾರ ಎಂದಿನಂತೆ ಬೆಳಗ್ಗೆ ಆಫೀಸ್ಗೆ ತೆರಳುವ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು – ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!
Advertisement
Advertisement
ಘಟನೆ ಕುರಿತಂತೆ ಮಹಿಳೆ ನೀಡಿರುವ ದೂರಿನಲ್ಲಿ, ಆರೋಪಿ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದ ಬಳಿ ಪ್ರಕೃತಿಯ ಕರೆಗೆ ಓಗೊಟ್ಟು ತನ್ನ ವಾಹನವನ್ನು ನಿಲ್ಲಿಸಿದ್ದಾನೆ. ಆದರೆ ನಂತರ ತನನ್ನು ಹಿಡಿದುಕೊಂಡು ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ಇದನ್ನು ನಿರಾಕರಿಸಿ ಆತನೊಂದಿಗೆ ಜಗಳವಾಡಿರುವುದಾಗಿ ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರತಿಪಕ್ಷಗಳು ಮಾಫಿಯಾವನ್ನು ರಕ್ಷಿಸುತ್ತಿದೆ: ಮಾಯಾವತಿ
Advertisement
ಕೊನೆಗೆ ಮಹಿಳೆ ಜೋರಾಗಿ ಕಿರುಚಾಡಿದ್ದನ್ನು ಕಂಡು ಆರೋಪಿ ಗಾಬರಿಯಿಂದ ಆಟೋ ಜೊತೆ ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ. ಇದೀಗ ಘಟನೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕ ಗೋಪಾಲ್ ಅವರನ್ನು ಬಂಧಿಸಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶ್ವೇತಾ ಚೌಹಾಣ್ ಹೇಳಿದ್ದಾರೆ.