ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣದಲ್ಲಿ (Bank fraud Case)ದೋಷಿಯಾಗಿರುವ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ (Krishnaiah Shetty) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಇಂದು ಬೆಳಗ್ಗೆ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ್ ಅವರು ದೋಷಿಗಳು ಎಂದು ಕೋರ್ಟ್ ಹೇಳಿತ್ತು. ಇಂದು ಸಂಜೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.
Advertisement
3 ವರ್ಷ ಶಿಕ್ಷೆ ವಿಧಿಸಿದ ಬೆನ್ನಲ್ಲೇ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕೃಷ್ಣಯ್ಯ ಶೆಟ್ಟಿ ಪರ ವಕೀಲರು ಮೇಲ್ಮನವಿ ಸಲ್ಲಿಸುವುದಾಗಿ ಮನವಿ ಮಾಡಿದ ಬೆನ್ನಲ್ಲೇ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ತರಬೇತಿ ವೇಳೆ IAFನ ಮಿರಾಜ್-2000 ಯುದ್ಧ ವಿಮಾನ ಪತನ – ಇಬ್ಬರು ಪೈಲಟ್ ಸೇಫ್
Advertisement
Advertisement
2012 ರಲ್ಲಿ ಬಾಲಾಜಿಕೃಪಾ ಎಂಟರ್‌ಪ್ರೈಸಸ್’ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಈವರೆಗೆ 3.53 ಕೋಟಿ ರೂ. ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿತ್ತು.
Advertisement
ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್‌ಪಿಸಿ ಸೆಕ್ಷನ್ 13(1)ಡಿ, 13(2) ಅಡಿ ಪ್ರಕರಣ ದಾಖಲಾಗಿತ್ತು.