ಬ್ಯಾಂಕ್ ಹಗರಣ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್!

Public TV
1 Min Read
krishnaiah shetty

– 3 ವರ್ಷ ಜೈಲು ಶಿಕ್ಷೆ ಅಮಾನತುಗೊಳಿಸಿದ ಹೈಕೋರ್ಟ್
– ದಂಡದ ಮೊತ್ತ ಠೇವಣಿ ಇಡಲು ಆದೇಶ

ಬೆಂಗಳೂರು: ಬ್ಯಾಂಕ್ ಹಗರಣ (Bank Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ (Krishnaiah Shetty) ಹೈಕೋರ್ಟ್ (High Court) ಬಿಗ್ ರಿಲೀಫ್ ನೀಡಿದೆ. ಕೃಷ್ಣಯ್ಯ ಶೆಟ್ಟಿಗೆ ವಿಧಿಸಿದ್ದ 3 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ.

ಬ್ಯಾಂಕ್ ಹಗರಣದಲ್ಲಿ ಕೃಷ್ಣಯ್ಯ ಶೆಟ್ಟಿಗೆ ಕೆಳಹಂತದ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ನೀಡಿತ್ತು. ಕೆಳಹಂತದ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಕೃಷ್ಣಯ್ಯ ಶೆಟ್ಟಿಗೆ ಶಿಕ್ಷೆ ಅಮಾನತುಗೊಳಿಸಿ ದಂಡದ ಮೊತ್ತ ಠೇವಣಿ ಇಡಲು ಹೈಕೋರ್ಟ್ ಆದೇಶ ಹೊರಡಿಸಿದೆ. ಇದನ್ನೂ ಓದಿ:‌ ತುಂಬಾ ಅನ್ಯಾಯ: ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಟ್ರಂಪ್‌ ಅಪಸ್ವರ

2012ರಲ್ಲಿ ಬಾಲಾಜಿಕೃಪಾ ಎಂಟರ್‌ಪ್ರೈಸಸ್’ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿದ್ದರು. ಈವರೆಗೆ 3.53 ಕೋಟಿ ರೂ. ಸಾಲ ತೀರಿಸಿಲ್ಲ ಎಂದು ಆರೋಪಿಸಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆ ನಡೆಸಿ, ಚಾರ್ಜ್‌ಶೀಟ್ ಸಲ್ಲಿಸಿತ್ತು. ಇದನ್ನೂ ಓದಿ: ಉದಯಗಿರಿ ದಾಂಧಲೆ ಕೇಸ್- ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ ನ್ಯಾಯಾಂಗ ಬಂಧನ

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120ಬಿ, 409, 419, 420, 467, 471 ಹಾಗೂ ಸಿಆರ್‌ಪಿಸಿ ಸೆಕ್ಷನ್ 13(1)ಡಿ, 13(2) ಅಡಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಪುತಿನ, ಕೆಎಸ್‌ನ ಟ್ರಸ್ಟ್‌ಗಳ ಚಟುವಟಿಕೆಗಳಿಗೆ ಸರ್ಕಾರದ ನೆರವು: ಸಚಿವ ಚಲುವರಾಯಸ್ವಾಮಿ

Share This Article