Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ಯಾನರ್ ಗಲಾಟೆ – ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | ಬ್ಯಾನರ್ ಗಲಾಟೆ – ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR

Bellary

ಬ್ಯಾನರ್ ಗಲಾಟೆ – ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR

Public TV
Last updated: January 2, 2026 7:54 am
Public TV
Share
3 Min Read
Ballary Banner Riot
SHARE

– ಪ್ರಕರಣದಲ್ಲಿ ಎ1 ಜನಾರ್ದನ ರೆಡ್ಡಿ, ಎ2 ಸೋಮಶೇಖರ್ ರೆಡ್ಡಿ, ಎ3 ಶ್ರೀರಾಮುಲು

ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಪ್ರಕರಣ ಸಂಬಂಧ ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಾಲ್ಮೀಕಿ ಪುತ್ತಳಿ ಅನಾವರಣ ಹಿನ್ನೆಲೆ ಹಾಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಮನೆ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಸಂಬಂಧ ಬಳ್ಳಾರಿಯ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ರೆಡ್ಡಿ ಮನೆ ಮುಂದೆ ಬ್ಯಾನರ್‌ ಗಲಾಟೆ – ಗುಂಡೇಟಿಗೆ ಕೈ ಕಾರ್ಯಕರ್ತ ಬಲಿ, ನಿಷೇಧಾಜ್ಞೆ ಜಾರಿ

ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಗುರುವಾರ (ಜ.1) ಒಂದು ಗುಂಪು ಮುಂದಾಗಿತ್ತು. ಈ ವೇಳೆ ಗಲಾಟೆ ಪ್ರಾರಂಭವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದರು. ಉದ್ವಿಗ್ನ ವಾತಾವರಣ ನಿರ್ಮಾಣವಾದ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಬಂದಿದ್ದಾರೆ. ಈ ಸಂದರ್ಭದಲ್ಲಿ ಎರಡು ಕಡೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿ, ಜನರನ್ನು ಚದುರಿಸಿದ್ದಾರೆ.

ಪೊಲೀಸರು ಲಾಠಿ ಚಾರ್ಜ್ ಮಾಡಿದರೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಈವರೆಗೂ ಕಾಂಗ್ರೆಸ್ ಕಾರ್ಯಕರ್ತನಿಗೆ ಗುಂಡಿನ ಹಾರಿಸಿದರು ಯಾರು ಎನ್ನುವುದು ತಿಳಿದು ಬಂದಿಲ್ಲ. ಇನ್ನೂ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿಗೆ ಗಂಭೀರ ಗಾಯವಾಗಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಗಲಾಟೆ ವಿಕೋಪದ ಬಳಿಕ ಪೊಲೀಸರು ರೆಡ್ಡಿ ಮನೆಯ ಬಳಿ 200 ಮೀಟರ್‌ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.ಇದನ್ನೂ ಓದಿ: ಬ್ಯಾನರ್‌ ವಿಚಾರಕ್ಕೆ ರೆಡ್ಡಿ ಮನೆ ಮುಂದೆ ಗಲಾಟೆ, ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

ಈ ಸಂಬಂಧ ನಾರಾ ಭರತ್ ರೆಡ್ಡಿ ಪ್ರತಿಕ್ರಿಯಿಸಿ, ಜನಾರ್ದನ ರೆಡ್ಡಿ ಬೆಂಬಲಿಗರ ಮಾಡಿದ ಗಲಾಟೆಯಲ್ಲಿ ನಮ್ಮ ಕಾರ್ಯಕರ್ತ ಮೃತಪಟ್ಟಿದ್ದಾರೆ. ಹೀಗಾಗಿ ಜನಾರ್ದನ ರೆಡ್ಡಿ ಮತ್ತು ಬೆಂಬಲಿಗರನ್ನು ಕೂಡಲೇ ಬಂಧಿಸಬೇಕು. ವಾಲ್ಮೀಕಿ ಕಾರ್ಯಕ್ರಮವನ್ನು ತಡೆಯಲು ಕಳೆದ 1 ತಿಂಗಳಿನಿಂದ ಇವರು ಬಹಳ ಪ್ರಯತ್ನ ಪಡುತ್ತಿದ್ದರು. ಈಗ ಗಲಾಟೆ ಮಾಡುವ ಮೂಲಕ ಕಾರ್ಯಕ್ರಮ ನಿಲ್ಲಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಶ್ರೀರಾಮುಲು ಪ್ರತಿಕ್ರಿಯಿಸಿ, ಗುಂಡಿನ ದಾಳಿಯನ್ನು ನಾವು ಯಾರು ಮಾಡಿಲ್ಲ. ಜನಾರ್ದನ ರೆಡ್ಡಿ ಮತ್ತು ನನಗೆ ಸರ್ಕಾರವೇ ಗನ್ ಮ್ಯಾನ್ ನೀಡಿದೆ. ಅವರು ಯಾರು ಫೈರ್ ಮಾಡಿಲ್ಲ. ಇಂದು ತಂತ್ರಜ್ಞಾನದ ಮೂಲಕ ಯಾವ ಗನ್‌ನಿಂದ ಬುಲೆಟ್ ಹಾರಿದೆ ಎನ್ನುವುದು ಗೊತ್ತಾಗುತ್ತದೆ. ಆ ಬುಲೆಟ್ ಅನ್ನು ವಿಧಿವಿಜ್ಞಾನ ಲ್ಯಾಬ್‌ಗೆ ಕಳುಹಿಸಿ ಕಂಡುಹಿಡಿಯಲಿ. ನಮ್ಮ ಕಡೆಯಿಂದ ಯಾರು ಫೈರ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ನೀವು ರಸ್ತೆಯಲ್ಲಿ ಎಲ್ಲಿ ಬೇಕಾದರೂ ಕಟ್ಟಿಕೊಳ್ಳಿ. ಆದರೆ ನಮ್ಮ ಮನೆಯ ಮುಂದೆ ಬ್ಯಾನರ್ ಕಟ್ಟಿದರೆ ಸಂಚಾರಕ್ಕೆ ಸಮಸ್ಯೆ ಆಗುತ್ತದೆ ಎಂದು ನಾವು ಮೊದಲೇ ಅವರಿಗೆ ಹೇಳಿದ್ದೆವು. ಆದರೆ ಅದನ್ನು ಮೀರಿ ಅವರು ನಮ್ಮ ಮನೆಯ ಮುಂದೆಯೇ ಕಟ್ಟಿದ್ದಾರೆ. ನಾವು ರಾಜಕಾರಣ ಮಾಡುತ್ತೇವೆ. ಆದರೆ ನಮ್ಮ ವಿರೋಧಿ ಪಕ್ಷದವರ ಮನೆಯ ಮುಂದೆ ಹೋಗಿ ಗಲಾಟೆ ಮಾಡುವುದಿಲ್ಲ. ಆದರೆ ಅವರು ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟಿದ್ದಾರೆ ಅಷ್ಟೇ ಅಲ್ಲದೇ ಕುರ್ಚಿ ಹಾಕಿಕೊಂಡು ಕುಳಿತು ರೌಡಿಗಳ ರೀತಿ ವರ್ತನೆ ಮಾಡಿದ್ದಾರೆ ಎಂದು ದೂರಿದರು.ಇದನ್ನೂ ಓದಿ: ನನ್ನ ಹತ್ಯೆಗೆ ನಾರಾ ಭರತ್ ರೆಡ್ಡಿ ಯತ್ನ: ಬುಲೆಟ್‌ ಪ್ರದರ್ಶಿಸಿದ ರೆಡ್ಡಿ

TAGGED:BallaryBharat ReddyJanardhan ReddysriramuluValmiki Bannerಎಫ್‍ಐಆರ್ಜನಾರ್ದನ ರೆಡ್ಡಿನಾರಾ ಭರತ್ ರೆಡ್ಡಿಬಳ್ಳಾರಿವಾಲ್ಮೀಕಿ ಬ್ಯಾನರ್ಶ್ರೀರಾಮುಲು
Share This Article
Facebook Whatsapp Whatsapp Telegram

Cinema news

RAM CHARAN
ರಂಗಸ್ಥಳಂ ಬಳಿಕ ಒಂದಾಗ್ತಿರೋ ಸೂಪರ್ ಹಿಟ್ ಕಾಂಬಿನೇಷನ್..!
Latest South cinema Top Stories
rashmika mandanna 6
ರಶ್ಮಿಕಾ ಮೇಲೆ ಮತ್ತೆ ಕನ್ನಡ ಫ್ಯಾನ್ಸ್ ಗರಂ
Cinema Latest Sandalwood
Yash
ಹೊಸ ವರ್ಷಕ್ಕೆ ಯಶ್‌ ವಿಶ್‌ – ಈ ಬಾರಿ ಫ್ಯಾನ್ಸ್‌ ಜೊತೆ ಬರ್ತ್‌ಡೇ ಆಚರಿಸಿಕೊಳ್ತಾರಾ?
Cinema Latest Sandalwood Top Stories
Sanvi Sudeep 1
ʻನನ್ನ ದೇಹ ಚರ್ಚೆಯ ವಿಷಯವಲ್ಲʼ – ಮಗಳು ಸಾನ್ವಿ ಹೇಳಿಕೆ ಸಮರ್ಥಿಸಿಕೊಂಡ ಸುದೀಪ್
Bengaluru City Cinema Latest Sandalwood Top Stories

You Might Also Like

DOCTOR
Crime

ಮದುವೆ ಆಗ್ತೀನಿ ಅಂತ ನಂಬಿಸಿ ನರ್ಸಿಂಗ್‌ ವಿದ್ಯಾರ್ಥಿನಿ ಮೇಲೆ ಸರ್ಕಾರಿ ವೈದ್ಯನಿಂದ ಅತ್ಯಾಚಾರ

Public TV
By Public TV
22 minutes ago
pm modi suresh kumar
Bengaluru City

ಬೆಂಗಳೂರಿಂದ ಕನ್ಯಾಕುಮಾರಿವರೆಗೆ 702 ಕಿಮೀ ಸೈಕಲ್‌ ತುಳಿದ ಶಾಸಕ ಸುರೇಶ್‌ ಕುಮಾರ್‌; ಮೋದಿ ಮೆಚ್ಚುಗೆ

Public TV
By Public TV
43 minutes ago
Banner Fight in front of Janardhana Reddys house congress activist killed in gunfire Ballari
Bellary

ರೆಡ್ಡಿ ಮನೆ ಮುಂದೆ ಬ್ಯಾನರ್‌ ಗಲಾಟೆ – ಗುಂಡೇಟಿಗೆ ಕೈ ಕಾರ್ಯಕರ್ತ ಬಲಿ, ನಿಷೇಧಾಜ್ಞೆ ಜಾರಿ

Public TV
By Public TV
9 hours ago
JanardhanaReddy
Bellary

ನನ್ನ ಹತ್ಯೆಗೆ ನಾರಾ ಭರತ್ ರೆಡ್ಡಿ ಯತ್ನ: ಬುಲೆಟ್‌ ಪ್ರದರ್ಶಿಸಿದ ರೆಡ್ಡಿ

Public TV
By Public TV
10 hours ago
Haveri Milk
Chikkaballapur

ಚಿಕ್ಕಬಳ್ಳಾಪುರ | ಹಾಲು ಉತ್ಪಾದಕ ರೈತರಿಗೆ ನ್ಯೂ ಇಯರ್ ಗಿಫ್ಟ್ – ಲೀಟರ್‌ಗೆ 1 ರೂ. ಹೆಚ್ಚಳ

Public TV
By Public TV
10 hours ago
stone pelting in front of Reddys house over banner issue police lathi charge Ballari
Bellary

ಬ್ಯಾನರ್‌ ವಿಚಾರಕ್ಕೆ ರೆಡ್ಡಿ ಮನೆ ಮುಂದೆ ಗಲಾಟೆ, ಕಲ್ಲು ತೂರಾಟ – ಪೊಲೀಸರಿಂದ ಲಾಠಿ ಚಾರ್ಜ್‌

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?