ಬೆಂಗಳೂರು/ಮೈಸೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ (Banu Mushtaq) ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೂರು ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಅರ್ಜಿಗಳ ವಿಚಾರಣೆ ನಡೆಯಲಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha), ಗಿರೀಶ್ ಕುಮಾರ್ ಮತ್ತು ಗೌರವ್ ಎಂಬವರಿಂದ ಪಿಐಎಲ್ ಸಲ್ಲಿಕೆಯಾಗಿದ್ದು, ಹೈಕೋರ್ಟ್ ಮುಖ್ಯ ನ್ಯಾ. ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ದಸರಾ (Mysuru Dasara) ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು, ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡುವ ಸಂಪ್ರದಾಯವಿದೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಭಾನು ಮುಷ್ತಾಕ್ ಅವರ ಆಯ್ಕೆ ಮಾಡಿದ್ದು ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ. ಹೀಗಾಗಿ ಬಾನು ಮುಷ್ತಾಕ್ ರಿಗೆ ನೀಡಿದ ಆಹ್ವಾನ ಹಿಂಪಡೆಯಲು ನಿರ್ದೇಶನ ನೀಡಬೇಕು ಅನ್ನೋದು ಅರ್ಜಿದಾರರ ಮನವಿ ಆಗಿದೆ. ಇದನ್ನೂ ಓದಿ: ಪ್ರಮೋದಾ ದೇವಿ ಒಡೆಯರ್‌ಗೆ ದಸರಾಗೆ ಅಧಿಕೃತ ಆಹ್ವಾನ ನೀಡಿದ ಹೆಚ್.ಸಿ ಮಹದೇವಪ್ಪ
ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ ಅವಿಭಾಜ್ಯ ಭಾಗವಾಗಿದ್ದು, ಹಿಂದೂ ಆಗಮಿಕ ಪದ್ದತಿ ಪ್ರಕಾರ ಕಟ್ಟುನಿಟ್ಟಾಗಿ ದಸರಾ ಉದ್ಘಾಟನೆ ನಡೆಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಲಾಗಿದೆ.
ಮೂರು ಪ್ರತ್ಯೇಕ ಪಿಐಎಲ್ ಗಳ ಮೂಲಕ ಮನವಿ ಸಲ್ಲಿಸಲಾಗಿದ್ದು, ಇಂದು ಹೈಕೋರ್ಟ್ ನಲ್ಲಿ ದಸರಾ ಉದ್ಘಾಟನೆ ವಿವಾದ ಇತ್ಯರ್ಥವಾಗಲಿದೆ. ಇದನ್ನೂ ಓದಿ: ಮೈಸೂರು | ಬಿಜೆಪಿಗೂ ಮುನ್ನವೇ ಹಿಂದೂ ಜಾಗರಣ ವೇದಿಕೆಯಿಂದ ʻಚಾಮುಂಡಿ ಬೆಟ್ಟ ಚಲೋ’ ಯಾತ್ರೆ
Banu Mushtaq Dasara inauguration Matter Three PLI petitions to be heard in the High Court today