ಮೈಸೂರು: ನಾಡಹಬ್ಬ ಮೈಸೂರು ದಸರಾ (Mysuru Dasara) ಹಿನ್ನೆಲೆ ತಾಯಿ ಚಾಮುಂಡಿಗೆ ಪೂಜೆ ವೇಳೆ ಲೇಖಕಿ ಬಾನು ಮುಷ್ತಾಕ್ (Banu Mushtaq) ಭಾವುಕರಾಗಿದ್ದಾರೆ.
ಮೈಸೂರು ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ದಸರಾ ಉದ್ಘಾಟನೆ ಬಾನು ಮುಷ್ತಾಕ್ ಬಂದಿದ್ದರು. ತಾಯಿ ಚಾಮುಂಡೇಶ್ವರಿ ಪೂಜೆ ವೇಳೆ ಅವರು ಭಾವುಕರಾಗಿದ್ದು, ಕಣ್ಣಂಚಲಿ ಬಂದ ಕಣ್ಣೀರನ್ನು ಒರೆಸಿಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು ರೇಷ್ಮೆ ಸೀರೆ, ಮಲ್ಲಿಗೆ ಮುಡಿದು ಚಾಮುಂಡಿ ತಾಯಿಯ ಸೀರೆ ಪಡೆದ ಬಾನು ಮುಷ್ತಾಕ್
ಈ ಹಿಂದೆ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಬಾನು ಮುಷ್ತಾಕ್ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿತ್ತು. ಆದರೆ ಸುಪ್ರೀಂ ಸಹ ಅರ್ಜಿ ವಜಾಗೊಳಿಸಿ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಇದನ್ನೂ ಓದಿ: Mysuru Dasara | ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ
ಇದೀಗ ಎಲ್ಲಾ ಅಡೆತಡೆಗಳನ್ನು ಎದುರಿಸಿ ಬಾನು ಮುಷ್ತಾಕ್ ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅಲ್ಲದೇ ತಾಯಿ ಚಾಮುಂಡೇಶ್ವರಿಗೆ ಸಂಪ್ರದಾಯ ಬದ್ಧವಾಗಿ ಪೂಜೆ ಸಲ್ಲಿಸುವ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.