– ಅರಿಶಿನ, ಕುಂಕುಮ ಬಗ್ಗೆ ಬಾನು ಮುಷ್ತಾಕ್‌ಗೆ ದ್ವೇಷದ ಭಾವನೆ ಇದೆ ಎಂದ ಮಾಜಿ ಸಂಸದ
ಮೈಸೂರು: ನೀವು ನಂಬಿರುವ ಅಲ್ಲಾ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳಲ್ಲ, ನಮ್ಮ ದೇವರು ಹೇಗೆ ಕರೆಸಿಕೊಳ್ಳುತ್ತಾರೆ ಎಂದು ಬಾನು ಮುಷ್ತಾಕ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಪ್ರಶ್ನಿಸಿದರು.
ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಅನ್ನುವ ಕಾರಣಕ್ಕೆ ನಾನು ವಿರೋಧಿಸುತ್ತಿಲ್ಲ. ಟಿಪ್ಪು ಜಯಂತಿ ಮಾಡಿ ಎಂದು ಮುಸ್ಲಿಮರು ಕೇಳಿರಲಿಲ್ಲ. ಸಿದ್ದರಾಮಯ್ಯ ಮುಸ್ಲಿಮರ ಓಲೈಕೆಗಾಗಿ ಟಿಪ್ಪು ಜಯಂತಿ ಮಾಡಿದರು. ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಕರೆಯಿರಿ ಎಂದು ಯಾವ ಮುಸ್ಲಿಮರು ಕೇಳಿರಲಿಲ್ಲ. ಅದರೂ ಸಿದ್ದರಾಮಯ್ಯ ಮಾಡಿದರು. ಬಾನು ಮುಷ್ತಾಕ್ ಅವರಿಗೆ ನೇರವಾಗಿ ಪ್ರಶ್ನೆ ಕೇಳ್ತೀನಿ. ಜನ ಸಾಹಿತ್ಯ ಭಾಷಣದಲ್ಲಿ ನಿಮ್ಮ ಭಾಷಣ ಏನಿತ್ತು? ಮುಸ್ಲಿಮರು ಕನ್ನಡ ಕಲಿಯಲು ಭುವನೇಶ್ವರಿ ತಾಯಿ ಮೂರ್ತಿ ಅಡ್ಡಿಯಾಯಿತು ಎಂದು ಅವರು ಹೇಳಿದ್ದಾರೆ. ಭುವನೇಶ್ವರಿಗೆ ಅರಿಶಿನ, ಕುಂಕುಮ ಇಟ್ಟಿದ್ದರಿಂದ ಮುಸ್ಲಿಮರು ಕನ್ನಡ ಕಲಿಯಲು ಆಗಿಲ್ಲ ಎಂದು ಮುಷ್ತಾಕ್ ಹೇಳಿದ್ದು ಸತ್ಯ ತಾನೆ? ಕನ್ನಡವನ್ನು ಭುವನೇಶ್ವರಿ ಆಗಿ ಒಪ್ಪದ ಬಾನು ಮುಷ್ತಾಕ್, ನಾಡದೇವಿ ರೂಪದಲ್ಲಿನ ಚಾಮುಂಡಿಯನ್ನು ಒಪ್ಪುತ್ತಾರಾ? ಅರಿಶಿನ, ಕುಂಕುಮ ಬಗ್ಗೆ ಯಾಕೆ ಬಾನು ಮುಷ್ತಾಕ್‌ಗೆ ತಕರಾರು, ಕಿರಿಕಿರಿ ಇದೆ? ಹಿಂದೂಗಳ ಮನೆಯಲ್ಲಿ ಯಾರೇ ಸುಮಂಗಲಿ ಹೋದರೂ ಕುಂಕುಮ ಕೊಡುತ್ತಾರೆ. ದೇವಸ್ಥಾನಕ್ಕೆ ಹೋದರೆ ಕುಂಕುಮ ಪ್ರಸಾದವಾಗಿ ಕೊಡುತ್ತಾರೆ. ಇಂತಹ ಕುಂಕುಮವೇ ಬಾನು ಮುಷ್ತಾಕ್‌ಗೆ ಕಿರಿಕಿರಿ ಉಂಟು ಮಾಡಿದೆ. ಅರಿಶಿನ ಕುಂಕುಮ ಬಗ್ಗೆ ಅವರಿಗೆ ದ್ವೇಷದ ಭಾವನೆ ಇದೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಚಾಮುಂಡೇಶ್ವರಿ ತಾಯಿ ನನ್ನನು ಕರಸಿಕೊಳ್ಳುತ್ತಿದ್ದಾರೆ: ಬಾನು ಮುಷ್ತಾಕ್
ನೀವು ನಂಬಿರುವ ನಿಮ್ಮ ಅಲ್ಲಾ ನಿಮ್ಮನ್ನು ಮಸೀದಿಗೆ ಕರೆಸಿಕೊಳ್ಳುವುದಿಲ್ಲ. ನಮ್ಮ ದೇವರು ಹೇಗೆ ಕರೆಸಿ ಕೊಳ್ಳುತ್ತಾರೆ? ತಮಿಳುನಾಡಿನಲ್ಲಿ ಮುಸ್ಲಿಮಗೆ ಮಾತೃ ಭಾಷೆ ತಮಿಳು. ಕರ್ನಾಟಕದಲ್ಲಿ ಯಾಕೆ ಮುಸ್ಲಿಮರಿಗೆ ಮಾತೃ ಭಾಷೆ ಕನ್ನಡ ಆಗಲ್ಲ? ತಲೆ ಮಾಸಿದ ಕಾಂಗ್ರೆಸ್ ನಾಯಕರು ನನಗೂ ಪ್ರಶ್ನೆ ಮಾಡಿದ್ದಾರೆ. ಇಸ್ಲಾಂ, ಕಿಶ್ಚಿಯನ್ ಅಕ್ರಮಣಕಾರಿ ಆಗಿ ಭಾರತಕ್ಕೆ ಬಂದವರು. ನಮ್ಮ ಆಚಾರ, ವಿಚಾರ, ಸಂಸ್ಕೃತಿ ಒಡೆದು ಹಾಕಲು ಯತ್ನಿಸಿದ್ದು, ಘಜ್ನಿ, ಮೊಗಲರು. ಇದೇ ರೀತಿ ನಮ್ಮ ನಂಬಿಕೆಯನ್ನು ಬಾನು ಮುಷ್ತಾಕ್ ಒಡೆಯುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಬಾನು ಮುಷ್ತಾಕ್ ಆಯ್ಕೆ ಸ್ವಾಗತಿಸಿದ ಸಂಸದ ಯದುವೀರ್ ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಏನೂ ಮಾತಾಡ್ತಾರಾ ಅದೇ ನಮ್ಮ ಮಾತು. ಅದೇ ನಮ್ಮ ನಿಲುವು. ನಮ್ಮ ಪಕ್ಷದ ನಿಲುವನ್ನೇ ನಾನು ಮಾತಾಡಿದ್ದೇನೆ. ಮೈಸೂರಿಗರಿಗೆ ಒಂದು ಪ್ರಶ್ನೆ ಕೇಳ್ತೀನಿ. ಭುವನೇಶ್ವರಿ ಬಗ್ಗೆ ಅವಮಾನಕಾರಿಯಾಗಿ ಮಾತಾಡಿದ ಬಾನು ಮುಷ್ತಾಕ್ ದಸರಾ ಉದ್ಘಾಟಿಸಬೇಕಾ? ಜನರೇ ಹೇಳಲಿ ಎಂದರು. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ – ಸರ್ಕಾರದ ನಿರ್ಧಾರ ಸ್ವಾಗತಿಸಿದ ಯದುವೀರ್
ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಿದ ಬಗ್ಗೆ ಮಾತನಾಡಿ, ನಮಸ್ತೆ ಸದಾ ವತ್ಸಲೆ ಅರ್ಥ ಮಾತೃಭೂಮಿಗೆ ವಂದಿಸು ಅಂತಾ. ಈ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್‌ಗೆ ಕ್ಷಮೆ ಕೇಳುವ ಸ್ಥಿತಿ ಬಂದಿದೆ ಎಂದರೆ ಕಾಂಗ್ರೆಸ್‌ಗೆ ಮಾತೃಭೂಮಿ ಮೇಲೆ ಎಷ್ಟು ಗೌರವವಿದೆ ನೋಡಿ ಎಂದು ಕುಟುಕಿದರು.