ಹಾಸನ: ಈ ಬಾರಿಯ ನಾಡಹಬ್ಬ ದಸರಾ (Dasara) ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಭಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D. Revanna), ಬಾನು ಮುಷ್ತಾಕ್ (Banu Mushtaq) ಅವರನ್ನು ಆಯ್ಕೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ್ದು, ವಿರೋಧ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಹಾಸನದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಮಹಿಳೆ, ಹೋರಾಟಗಾರ್ತಿ ದಸರಾ ಉದ್ಘಾಟನೆ ಮಾಡಲಿ ನನಗೆ ಸಂತೋಷ ಇದೆ. ಇದರಲ್ಲಿ ಹಿಂದೂ-ಮುಸ್ಲಿಂ ಬೇಧ ಭಾವ ಮಾಡಬಾರದು. ಹಿಂದೂ-ಮುಸ್ಲಿಂ ಎಂದು ಬೇರ್ಪಡಿಸುವುದು ಸೂಕ್ತವಲ್ಲ. ಯಾರಾದರೂ ವಿರೋಧ ಮಾಡಲಿ, ಹಿಂದೂ, ಮುಸ್ಲಿಂ ಯಾವುದೂ ಇಲ್ಲ, ನಾವೆಲ್ಲ ಒಂದೇ ಭಾರತೀಯರು, ನನಗೆ ಆ ತರಹದ ಭಾವನೆ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾತಾಡೋರು ಮಾತಾಡಲಿ, ಸೂಕ್ತ ವೇದಿಕೆಯಲ್ಲಿ ನಾನು ಮಾತಾಡ್ತೀನಿ: ಬಾನು ಮುಷ್ತಾಕ್
ಹಾಸನ ಜಿಲ್ಲೆಯ ಮಹಿಳೆಗೆ ಒಂದು ಅವಕಾಶ ಕೊಟ್ಟಿದ್ದಾರೆ, ಅವರೂ ಹೋರಾಟ ಮಾಡಿಕೊಂಡು ಬಂದಿರುವವರು, ಬಾನು ಮುಷ್ತಾಕ್ ಅವರು ದೇವೇಗೌಡರ ಕಾಲದವರು. ಇದರಲ್ಲಿ ರಾಜಕೀಯ ಎಲ್ಲಾ ಬಿಟ್ಟಾಕಿ, ಇದಕ್ಕೆಲ್ಲಾ ವಿರೋಧ ಮಾಡಬಾರದು. ಅಬ್ದುಲ್‍ಕಲಾಂ ರಾಷ್ಟ್ರಪತಿ ಆಗಿರಲಿಲ್ಲವೇ, ದೇವೇಗೌಡರು ಅವರನ್ನು ಹೇಗೆ ನಡೆಸಿಕೊಂಡರು ಎಂದು ಪ್ರಶ್ನಿಸಿದ್ದಾರೆ.
ಬಾನು ಮುಷ್ತಾಕ್ ಹೆಸರು ಘೋಷಣೆ ಮಾಡುತ್ತಿದ್ದಂತೆ ಶಾಸಕರುಗಳಾದ ಬಸವನಗೌಡ ಪಾಟೀಲ್ ಯತ್ನಾಳ್, ಮುನಿರತ್ನ, ಮಾಜಿಸಂಸದ ಪ್ರತಾಪ್‍ಸಿಂಹ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಇದು ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆಗೆ ಶಾಸಕ ಯತ್ನಾಳ್ ಆಕ್ಷೇಪ