ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುರುವಾರ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ)ದ ಕಮಾಂಡರ್ ಹತ್ಯೆಯಾಗಿದ್ದಾನೆ.
ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿ, ಎಲ್‌ಇಟಿ ಭಯೋತ್ಪಾದಕ ಕಮಾಂಡರ್ ಯೂಸುಫ್ ಕಾಂಟ್ರೋನನ್ನು ಹತ್ಯೆ ಮಾಡಿದ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ(ಐಜಿಪಿ) ವಿಜಯ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು
ಇತ್ತೀಚೆಗೆ ಭಯೋತ್ಪಾದಕ ಯೂಸುಫ್ ಬಗ್ದಾಮ್ ಜಿಲ್ಲೆಯಲ್ಲಿ ಎಸ್‌ಪಿಒ ಹಾಗೂ ಅವರ ಸಹೋದರ ಸೇರಿದಂತೆ, ನಾಗರಿಕರು ಹಾಗೂ ಭದ್ರತಾ ಪಡೆಗಳ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದ್ದಾರೆ. ಎನ್‌ಕೌಂಟರ್ ಬಳಿಕ ಭಯೋತ್ಪಾದಕರ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ವಸ್ತುಗಳನ್ನು ವಶಪಡಿಸಿಕೊಳ್ಳಾಗಿದೆ ಎಂದು ವಿಜಯ್ ಕುಮಾರ್ ತಿಳಿಸಿದರು. ಇದನ್ನೂ ಓದಿ: ದೆಹಲಿ ಕಾರ್ಯಾಚರಣೆ ಅಪರಾಧ ಕೃತ್ಯ: ಶಶಿ ತರೂರ್
ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆ ಹಚ್ಚಲು ಮೌಲ್ವಾ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಭಯೋತ್ಪಾದಕರನ್ನು ಶರಣಾಗುವಂತೆ ಕೇಳಿದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಲು ಯತ್ನಿಸಿದ್ದಾರೆ. ಎನ್‌ಕೌಂಟರ್ ವೇಳೆ ಮೂವರು ಸೈನಿಕರು ಹಾಗೂ ಒಬ್ಬ ನಾಗರಿಕನಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.