– ದೆಹಲಿ ಮಾದರಿ ಹತ್ಯೆಗೆ ಬೆಚ್ಚಿದ ಬೆಂಗಳೂರು
ಬೆಂಗಳೂರು: ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು (Fridge) ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ (Bengaluru) ವೈಯಾಲಿಕಾವಲ್‌ನ (Vyalikaval) ವಿನಾಯಕನಗರದಲ್ಲಿ (Vinayaka Nagar) ನಡೆದಿದೆ.
ಮಹಾಲಕ್ಷ್ಮಿ (29) ಕೊಲೆಯಾದ ಮಹಿಳೆ. ವೈಯಾಲಿಕಾವಲ್‌ನ ಪೈಪ್‌ಲೈನ್ ರಸ್ತೆಯಲ್ಲಿ ಭೀಕರ ಹತ್ಯೆ ನಡೆದಿದೆ. ಮಹಿಳೆಯನ್ನು ಕೊಂದು ನಂತರ ಮೃತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಹತ್ಯೆ ಬಳಿಕ ಮಾಂಸದ ಗುಡ್ಡೆ ಮಾಡಿ ತರಕಾರಿ ಜೋಡಿಸುವಂತೆ ಮೃತದೇಹದ ಭಾಗಗಳನ್ನು ಫ್ರಿಡ್ಜ್‌ನಲ್ಲಿ ಇರಿಸಿ ಆರೋಪಿ ಎಸ್ಕೇಪ್ ಆಗಿದ್ದಾನೆ. 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಮೆರಿಕ ಭಾರತೀಯ ರಾಯಭಾರ ಕಚೇರಿಯಲ್ಲಿ ಅಧಿಕಾರಿ ನಿಗೂಢ ಸಾವು
2-3 ತಿಂಗಳಿನಿಂದ ಮಹಿಳೆ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಲಕ್ಷ್ಮಿ ಬೇರೆ ರಾಜ್ಯದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಪಿಕಪ್ ಡ್ರಾಪ್ ಎಂದು ಒಬ್ಬ ಯುವಕ ಆಕೆಯನ್ನು ಕರೆದೊಯ್ಯುತ್ತಿದ್ದ. ಹೀಗಾಗಿ ಆತನೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ. ಇದನ್ನೂ ಓದಿ: ದರೋಡೆ ಗ್ಯಾಂಗ್ ಜೊತೆ ಕೈಜೋಡಿಸಿ 9 ಲಕ್ಷ ಪಡೆದಿದ್ದ ಪೊಲೀಸ್ – ಹೆಡ್ ಕಾನ್ಸ್‌ಟೇಬಲ್ ಸೇರಿ 7 ಮಂದಿ ಅರೆಸ್ಟ್
ಕಳೆದ ಎರಡು ವರ್ಷಗಳ ಹಿಂದೆ ದೆಹಲಿಯಲ್ಲೂ ಇದೇ ಮಾದರಿಯ ಘಟನೆಯೊಂದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಆರೋಪಿ ಅಫ್ತಾಬ್ ಪೂನಾವಾಲಾ ಎಂಬಾತ ತನ್ನ ಲಿವ್ ಇನ್ ಗೆಳತಿ (Live-In Partner) ಶ್ರದ್ಧಾ ವಾಕರ್‌ನನ್ನು ಹತ್ಯೆ ಮಾಡಿದ್ದ ಘಟನೆ ನಡೆದಿತ್ತು. ಅಫ್ತಾಬ್ ತನ್ನ ಗೆಳತಿ ಶ್ರದ್ಧಾ ವಾಕರ್ ಕತ್ತು ಹಿಸುಕಿ ಕೊಲೆ ಮಾಡಿದ ನಂತರ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ. ನಂತರ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು 3 ವಾರಗಳ ಕಾಲ 300 ಲೀ. ಫ್ರಿಡ್ಜ್‍ನಲ್ಲಿ ಇರಿಸಿದ್ದ. ನಂತರ ವಿವಿಧೆಡೆ ಬಿಸಾಡಿದ್ದ. ಇದೀಗ ಅದೇ ರೀತಿಯ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕು ಇರಿತ