– ಪರಿಚಯಸ್ಥ ಯುವಕನಿಂದಲೇ ಕೃತ್ಯ ಶಂಕೆ
ಬೆಂಗಳೂರು: ಲೇಡಿಸ್ ಪಿಜಿಗೆ (Ladies PG) ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ (Bengaluru) ಕೋರಮಂಗಲದ (Koramangala) ವಿಆರ್ ಲೇಔಟ್‌ನಲ್ಲಿ ನಡೆದಿದೆ.
ಕೃತಿ ಕುಮಾರಿ (24) ಮೃತ ಯುವತಿ. ಈಕೆ ಬಿಹಾರ ಮೂಲದವಳಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ರಾತ್ರಿ 11:30ರ ವೇಳೆಗೆ ಘಟನೆ ನಡೆದಿದೆ. ರಾತ್ರಿ 11:10ರ ವೇಳೆಗೆ ಯುವಕ ಚಾಕು ಸಮೇತ ಪಿಜಿಯೊಳಗೆ ಬಂದಿದ್ದಾನೆ. ಮೂರನೇ ಮಹಡಿಯಲ್ಲಿರುವ ರೂಂ ಬಳಿ ಚಾಕುವಿನಿಂದ ಹಲ್ಲೆ ನಡೆಸಿದ್ದು, ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಘಟನೆಯಲ್ಲಿ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಬಿಟ್ಟು ಬಿಡದೇ ಕಾಡುತ್ತಿರುವ ಚಾಂದಿಪುರ ವೈರಸ್ – ಏನಿದರ ಲಕ್ಷಣ?
ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಕಾರ್ಯ ನಡೆಯುತ್ತಿದೆ. ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಜೈಲಲ್ಲಿ ಧ್ಯಾನ, ಅಧ್ಯಾತ್ಮ ಪುಸ್ತಕಗಳ ಓದು – ಅಧ್ಯಾತ್ಮದತ್ತ ದರ್ಶನ್ ಒಲವು?