ಬೆಂಗಳೂರಿನಲ್ಲಿ ಯುವಕನ ಬರ್ಬರ ಹತ್ಯೆ

Public TV
1 Min Read
Bengaluru Murder

ಬೆಂಗಳೂರು: ಶನಿವಾರ ತಡರಾತ್ರಿ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder) ಮಾಡಿರುವ ಘಟನೆ ಬೆಂಗಳೂರಿನ (Bengaluru) ಹನುಮಂತ ನಗರದ (Hanumanth Nagar) 80 ಅಡಿ ರಸ್ತೆಯಲ್ಲಿ ನಡೆದಿದೆ.

ವಿಜಯ್ (21) ಹತ್ಯೆಯಾದ ಯುವಕ. ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಯುವಕನನ್ನು ಹತ್ಯೆಗೈದಿದ್ದಾರೆ. ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ – ಕಚೇರಿಯಲ್ಲೇ ನೇಣು ಬಿಗಿದುಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ

ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಹನುಮಂತ ನಗರದ ಶ್ರೀನಿವಾಸ ನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಆಟೋದಲ್ಲಿ ಬಂದ ದುಷ್ಕರ್ಮಿಗಳು ಯುವಕನ ಮೇಲೆ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನಕಲಿ ದಾಖಲೆ ಸೃಷ್ಠಿಸಿ ಭಾರತ ಸೇರಿದ್ದ ಅತ್ಯಾಚಾರಿ ಆರೋಪಿ ಮೌಲ್ವಿ- ಸ್ಫೋಟಕ ಸತ್ಯ ಬಯಲು

Share This Article