ರಾಮನಗರ: ಹಾಡಹಗಲೇ ರೌಡಿಶೀಟರ್‌ವೊಬ್ಬನನ್ನ (Rowdy Sheeter) ಲಾಂಗು, ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾರೋಹಳ್ಳಿ (Harohalli) ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಬಳಿ ನಡೆದಿದೆ.
ಬೆಂಗಳೂರಿನ (Bengaluru) ಕೋಣನಕುಂಟೆ ನಿವಾಸಿ ರೌಡಿಶೀಟರ್ ಸಂತೋಷ್ (33) ಅಲಿಯಾಸ್ ಕರಡಿ ಹತ್ಯೆಯಾದ ವ್ಯಕ್ತಿ. ಬೆಂಗಳೂರಿನ ಹಲವು ಠಾಣೆಗಳಲ್ಲಿ ಮೃತ ವ್ಯಕ್ತಿ ಮೇಲೆ ಕ್ರಿಮಿನಲ್ ಕೇಸ್ ಗಳಿದ್ದು, ಹಳೇ ವೈಷಮ್ಯಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಪ್ರಕರಣ – 8 ಆರೋಪಿಗಳ ಬಂಧನ
ಕಾರಿನಿಂದ ಬೈಕ್‌ಗೆ ಗುದ್ದಿ ಆತ ಕೆಳಗೆ ಬಿದ್ದ ಬಳಿಕ ಲಾಂಗು ಮಚ್ಚು ಹಿಡಿದು ಅಟ್ಟಾಡಿಸಿರೋ ನಾಲ್ವರು ದುಷ್ಕರ್ಮಿಗಳು ಬರ್ಬರವಾಗಗಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಪಾಕಿಸ್ತಾನದ ಬೇಹುಗಾರಿಕಾ ಏಜೆನ್ಸಿಯಿಂದ ಕದಂಬ ನೌಕಾ ನೆಲೆಯ ಯುದ್ಧ ಹಡಗುಗಳ ಮಾಹಿತಿ ಪಡೆಯಲು ಯತ್ನ!
ಸ್ಥಳಕ್ಕೆ ಎಸ್ಪಿ ಶ್ರೀನಿವಾಸ್ ಗೌಡ ಭೇಟಿ, ಪರಿಶೀಲನೆ ನಡೆಸಿದ್ದು, ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ವೀಡಿಯೋ ಆಧರಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ. ಇದನ್ನೂ ಓದಿ: ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡಲು ಕೇಂದ್ರದಿಂದ ಜಾತಿಗಣತಿ: ಸದಾನಂದಗೌಡ