ಬೆಂಗಳೂರು: ಗುರುಪುರ ಮತ್ತು ನೇತ್ರಾವತಿ ನದಿಗಳ (Netravati River) ಪಾತ್ರದಲ್ಲಿ ಜಲಸಾರಿಗೆ ಸಂಪರ್ಕವನ್ನು ಕಲ್ಪಿಸಲು ಬಾರ್ಜ್ಗಳ ಸೇವೆಯನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ (Basavaraj Bommai) ಪ್ರಕಟಿಸಿದರು.
ತಮ್ಮ ಬಜೆಟ್ ಭಾಷಣದಲ್ಲಿ, ಬಾಗಲಕೋಟೆ- ಕಂಕಣವಾಡಿ- ಕದಮ್ಪುರ, ಕಲಬುರಗಿ- ಸನ್ನತಿ, ಶಿವಮೊಗ್ಗ- ಕೊಗರು- ಶಿಗ್ಲು, ಮಂಗಳೂರು- ಹಂಗಾರಕಟ್ಟೆಯಲ್ಲಿ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಹೊಸ ಲೈಟ್ ಕಾರ್ಗೋ ಟ್ರಾನ್ಸ್ಪೋರ್ಟ್ (LCT) ಬೋಟ್ ಸೇವೆಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
Advertisement
Advertisement
ಮುಖ್ಯಾಂಶಗಳು:
ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಮಾಜಾಳಿಯಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರನ್ನು ನಿರ್ಮಿಸಲು 275 ಕೋಟಿಯ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಿ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮತ್ತು ಸಾಗರಮಾಲಾ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಬೊಮ್ಮಾಯಿ ಬಜೆಟ್ : ಶಂಕರ್ ನಾಗ್ ಹೆಸರಿನಲ್ಲಿ ಟ್ಯಾಕ್ಸಿ, ಆಟೋ ನಿಲ್ದಾಣ
Advertisement
ಹಂಗಾರಕಟ್ಟೆ ಮತ್ತು ಉಡುಪಿಯಲ್ಲಿ, ಕೊಚ್ಚಿನ್ ಶಿಪ್ಯಾರ್ಡ್ಸ್ ಲಿಮಿಟೆಡ್ರವರಿಂದ ದೋಣಿ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಹಳೆ ಮಂಗಳೂರು ಬಂದರಿನಲ್ಲಿ ಹೆಚ್ಚುವರಿ ಶಿಪ್ಯಾರ್ಡ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗುವುದು. ಇದು ಕರಾವಳಿ ಪ್ರದೇಶದಲ್ಲಿ ಕೈಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳ ಬೆಳವಣಿಗೆಗೆ ಪೂರಕವಾಗಲಿದೆ.
Advertisement
ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು (Tourism) ಉತ್ತೇಜಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಮರೀನಾವನ್ನು ಅಭಿವೃದ್ಧಿಪಡಿಸಲಾಗುವುದು. ಇದನ್ನೂ ಓದಿ: Karnataka Budget 2023ː ಬೆಂಗ್ಳೂರು ಅಭಿವೃದ್ಧಿಗೆ 9,698 ಕೋಟಿ – ಪ್ರತಿ ವಾರ್ಡ್ನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ
ಮಾನ್ಯ ಪ್ರಧಾನ ಮಂತ್ರಿಗಳ ಆಶಯದಂತೆ, ಬ್ಲೂ ಎಕೊನಾಮಿಯ ಅಭಿವೃದ್ಧಿಗಾಗಿ ಎಡಿಬಿ ಸಹಯೋಗದೊಂದಿಗೆ ಅಂದಾಜು 1,100 ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರವು ಉದ್ದೇಶಿಸಿದೆ.
ಕರಾವಳಿ ಪ್ರದೇಶದಲ್ಲಿ ಜನರ ಸುಗಮ ಸಂಚಾರಕ್ಕಾಗಿ ಮತ್ತು ವಾಣಿಜ್ಯ ವ್ಯವಹಾರಗಳನ್ನು ಉತ್ತಮಗೊಳಿಸಲು ಮಂಗಳೂರು- ಕಾರವಾರ- ಗೋವಾ- ಮುಂಬಯಿ ವಾಟರ್ವೇಸ್ ಅನ್ನು ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k