ರಾಮನಗರ: ನಿರಂತರ ಮಳೆಗೆ ಕೊಟ್ಟಿಗೆ ಗೋಡೆ ಕುಸಿದಿದ್ದು, ಪಕ್ಕದಲ್ಲೇ ಮಲಗಿಕೊಂಡಿದ್ದ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪರ್ಭಿನ್(4), ಇಷಿಕಾ(3) ಮೃತ ದುರ್ದೈವಿಗಳು. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೆಡ್ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಾಯವಾಗಿದೆ. ಇದನ್ನೂ ಓದಿ: ವಿಶ್ವವಿಖ್ಯಾತ ದಸರಾ ಮಹೋತ್ಸವ – ಇಂದು ಗಜ ಪಯಣ ಆರಂಭ
Advertisement
Advertisement
ನೇಪಾಳ ಮೂಲದ ಕುಟುಂಬವೊಂದು ದನದ ಕೊಟ್ಟಿಗೆ ಪಕ್ಕದಲ್ಲೇ ಶೆಡ್ ನಿರ್ಮಿಸಿಕೊಂಡು ವಾಸವಾಗಿತ್ತು. ಹೋಟೆಲ್ ಒಂದರಲ್ಲಿ ಇವರು ಕೆಲಸ ಮಾಡುತ್ತಿದ್ದರು. ನಿರಂತರ ಮಳೆ ಬರುತ್ತಿದ್ದ ಹಿನ್ನೆಲೆ ಶೆಡ್ ಮೇಲೆ ಏಕಾಏಕಿ ಕೊಟ್ಟಿಗೆ ಗೋಡೆ ಕುಸಿದೆ. ಈ ಹಿನ್ನೆಲೆ ಸ್ಥಳದಲ್ಲೇ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮೀನಾ ಬಿತ್ತು ಮತ್ತು ಮೋನಿಷಾರಿಗೆ ಗಾಯವಾಗಿದೆ.
Advertisement
Advertisement
ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಗಾಯಾಳುಗಳಿಗೆ ಮಾಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಫ್ಲ್ಯಾಶ್ಲೈಟ್ನಲ್ಲಿ ಇಸಿಜಿ ಟೆಸ್ಟ್ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು