– ಭ್ರಷ್ಟಾಚಾರ ಮಾಡಿದವರೇ ಭ್ರಷ್ಟಾಚಾರ ವಿರುದ್ಧ ನಡೆಸುತ್ತಿರೋ ಹೋರಾಟಕ್ಕೆ ಬೆಂಬಲ ಇಲ್ಲ: ಬಿಜೆಪಿ ಶಾಸಕ
ವಿಜಯಪುರ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಧಮ್, ತಾಕತ್ ಇದ್ರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸವಾಲು ಹಾಕಿದರು.
Advertisement
ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ವಿಜಯೇಂದ್ರ ಕೊರೊನಾ ಸಂದರ್ಭದಲ್ಲಿ ಮಾಡಿದ ಭ್ರಷ್ಟಾಚಾರ ಹೊರಗೆ ಬರಲಿ. ಭ್ರಷ್ಟಾಚಾರ ಮಾಡಿದವರು ಭ್ರಷ್ಟಾಚಾರ ವಿರುದ್ಧ ಮಾಡುತ್ತಿರುವ ಹೋರಾಟಕ್ಕೆ ಬೆಂಬಲ ಇಲ್ಲ ಎಂದು ಬಿಜೆಪಿ ಪಾದಯಾತ್ರೆಗೆ ಟಾಂಗ್ ನೀಡಿದರು. ಇದನ್ನೂ ಓದಿ: ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ: ಎಚ್‌ಡಿಕೆ ಸವಾಲು
Advertisement
Advertisement
ಡಿಕೆಶಿ-ವಿಜಯೇಂದ್ರ ನಡುವೆ ಅಡ್ಜೆಸ್ಟ್‌ಮೆಂಟ್ ಇದೆ. ಅಡ್ಜೆಸ್ಟ್‌ಮೆಂಟ್ ಇದೆ ಅನ್ನೋದು 100% ನಿಜ. ಭೋವಿ, ತಾಂಡಾ ನಿಗಮಗಳ ತನಿಖೆ ಆಗಲಿ. ಭ್ರಷ್ಟ ಕುಟುಂಬವನ್ನ ಬಿಜೆಪಿ ಅಧ್ಯಕ್ಷರನ್ನಾಗಿ ಮುಂದುವರಿಸಬೇಡಿ. ಸಿದ್ದರಾಮಯ್ಯ, ಡಿಕೆಶಿಗೆ ಧಮ್, ತಾಕತ್ ಇದ್ದರೆ ವಿಜಯೇಂದ್ರ ಭ್ರಷ್ಟಾಚಾರ ಹೊರಗೆ ತರಲಿ ಎಂದು ಸವಾಲೆಸೆದರು.
Advertisement
ವಿಜಯೇಂದ್ರ ಹಾಗೂ ಡಿಕೆಶಿ ಇಬ್ಬರೂ ಭ್ರಷ್ಟರು. ಇಬ್ಬರು ಸೇರಿಯೇ ಬಿಜಿನೆಸ್ ಮಾಡ್ತಿದ್ದಾರೆ. ಯಡಿಯೂರಪ್ಪ ಸಹ ಯಾವುದೇ ಪಕ್ಷದ ವೇದಿಕೆಗೆ ಬರಬಾರದು. ಯಡಿಯೂರಪ್ಪ ಮೇಲೆ ಗಂಭೀರ ಆರೋಪಗಳಿವೆ. ಅವರು ವೇದಿಕೆಗೆ ಬರಲೇಬಾರದು ಎಂದು ಕಿಡಿಕಾರಿದರು. ಇದನ್ನೂ ಓದಿ: Wayanad LandSlides | ಕರ್ನಾಟಕದಿಂದ 100 ಮನೆ ನಿರ್ಮಾಣ: ಸಿದ್ದರಾಮಯ್ಯಗೆ ಕೃತಜ್ಞತೆ ಸಲ್ಲಿಸಿದ ರಾಹುಲ್
ಬಿಜೆಪಿ ವಾಲ್ಮೀಕಿ ಹಗರಣದ ಬಗ್ಗೆ ಯಾಕೆ ಮೌನವಾಗಿದೆ? ವಾಲ್ಮೀಕಿಯಲ್ಲಿ ಡಿಕೆಶಿ ಇದ್ದಾರೆ. ರಾಹುಲ್ ಗಾಂಧಿ ಡೈರೆಕ್ಷನ್ ಇದೆ. ಇದೆ ಕಾರಣಕ್ಕೆ ವಾಲ್ಮೀಕಿ ಹಗರಣ ಮುಚ್ಚಿಡಲಾಗ್ತಿದೆ. ಯಡಿಯೂರಪ್ಪ ಶಿಷ್ಯ ರಾಜು ಪ್ರಕರಣದಲ್ಲಿದ್ದಾನೆ. ಇದನ್ನ ಬಿಟ್ಟು ಮೈಸೂರು ಹಗರಣಕ್ಕೆ ಬೆನ್ನು ಹತ್ತಿದ್ದಾರೆ ಎಂದು ಬಿಎಸ್‌ವೈ ಕುಟುಂಬದ ವಿರುದ್ಧ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದರು.
ದಲಿತರ ಹತ್ಯೆ ಸಿದ್ದು ಸರ್ಕಾರದಲ್ಲೇ ಹೆಚ್ಚಾಗುತ್ತಿದೆ. ವಾಲ್ಮೀಕಿ ಹಗರಣದಲ್ಲಿ ಅಧಿಕಾರಿ ಸಾವಿಗೆ ಶರಣಾದ. ಈಗ ಪಿಎಸ್‌ಐ ನೇಣಿಗೆ ಶರಣಾದ. ಶಾಸಕರ ಭ್ರಷ್ಟಾಚಾರವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಇತರರ ಗತಿ ಏನು ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುಡಾ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಿಎಸ್‌ವೈ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ರಾಜೀನಾಮೆ ನೀಡಬೇಕು. ಸಿಎಂ ಮಾತ್ರ ರಾಜೀನಾಮೆ ನೀಡಿದರೆ ಸಾಲದು. ಸಿಎಂ ರಾಜೀನಾಮೆ ಕೊಟ್ಟರೆ, ಡಿಕೆ ಶಿವಕುಮಾರ್ ಸಿಎಂ ಆಗಲು ಅನುಕೂಲವಾಗುತ್ತದೆ. ಹಾಗಾಗಿ ಇಡೀ ಸರ್ಕಾರವೇ ಅಧಿಕಾರದಿಂದ ಹಿಂದೆ ಸರಿದು ರಾಜೀನಾಮೆ ನೀಡಬೇಕು. ಮತ್ತೆ ಚುನಾವಣೆಗೆ ಹೋಗೋಣ. ನಾವೂ ನಮ್ಮ ಭ್ರಷ್ಟ ರಾಜ್ಯಾಧ್ಯಕ್ಷರು ಬೇಡಾ ಎಂದು ಹೇಳುತ್ತೇವೆಂದು ವಿಜಯೇಂದ್ರ ವಿರುದ್ಧವೂ ಕಿಡಿಕಾರಿದರು.