ವಿಜಯಪುರ: ಶ್ರೀಗಳು ವಿಲ್‍ನಲ್ಲಿ ಬರೆದಿಟ್ಟಿರುವಂತೆ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತಿಳಿಸಿದರು.
ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ (Siddheshwar Swamiji) ಲಿಂಗೈಕ್ಯ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಗೆ ಮಾತನಾಡಿದ ಅವರು, ಶ್ರೀಗಳು ಈ ಶತಮಾನ ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿ. ಸಿದ್ದೇಶ್ವರ ಶ್ರೀಗಳಿಂದಲೇ ವಿಜಯಪುರ (Vijayapura) ಜಿಲ್ಲೆಗೆ ಒಂದು ಉನ್ನತ ಸ್ಥಾನವಿತ್ತು ಅಂತಹ ಶ್ರೀಗಳು ಇನ್ನಿಲ್ಲ. ಶ್ರೀಗಳನ್ನು ಕಳೆದುಕೊಂಡ ವಿಜಯಪುರ ಜನ ಬಡವರಾಗಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
Advertisement
Advertisement
ಇನ್ನು ಶ್ರೀಗಳ ದರ್ಶನಕ್ಕೆ 10 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಬಂದಂತಹ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ವಿಜಯಪುರ: ಸಿದ್ಧೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯತ್ತ ಭಕ್ತಸಾಗರ
Advertisement
Advertisement
ಕಳೆದ ಐದು ದಿನಗಳಿಂದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಸ್ಥಿರವಾಗಿತ್ತು. ಆದರೆ ಸೋಮವಾರ ಮಧ್ಯಾಹ್ನ ಮತ್ತು ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ ಸ್ವಾಮೀಜಿಗೆ ಉಸಿರಾಟ ತೊಂದರೆ ಜಾಸ್ತಿಯಾಗಿದೆ. ಸ್ವಾಮೀಜಿ ಬಿಪಿ ಸ್ವಲ್ಪ ಕಡಿಮೆಯಾಗಿದೆ. ಸ್ವಾಮೀಜಿ ಆಹಾರ ತೆಗೆದುಕೊಳ್ಳುತ್ತಿಲ್ಲ. ಆದರೂ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಸ್ಥಿರವಾಗಿದೆ. ನಾವು ನಮ್ಮ ಶಕ್ತಿ ಮೀರಿ ಪ್ರಯತ್ನ ಪಡುತ್ತಿದ್ದೇವೆ. ಸ್ವಾಮೀಜಿ ಆಸ್ಪತ್ರೆಗೆ ಬರಲು ಒಪ್ಪುತ್ತಿಲ್ಲ. ಏನು ಚಿಕಿತ್ಸೆ ಕೊಡುತ್ತಿರೋ ಇಲ್ಲೇ ಕೊಡಿ ಸ್ವಾಮೀಜಿ ಹೇಳಿದ್ದರು ಎಂದು ವೈದ್ಯರು ತಿಳಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಂಜೆ 6:05ಕ್ಕೆ ಲಿಂಗೈಕ್ಯರಾಗಿದ್ದಾರೆ. ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಗಣ್ಯರಿಂದ ಕಣ್ಣೀರ ವಿದಾಯ