ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ (Pay DCM) ಹೆಸರಿನಲ್ಲಿ ಕಮಿಷನ್ ಹಗರಣ ನಡೀತಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸರ್ಕಾರದ ವಿರುದ್ಧ ಮತ್ತೆ ಕಮಿಷನ್ ಬಾಂಬ್ ಸಿಡಿಸಿದ್ದಾರೆ.
ವಿಧಾನಸಭೆ ಕಲಾಪ (Belagavi Session) ಶೂನ್ಯವೇಳೆಯಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಟೆಂಡರ್/ಕಾಮಗಾರಿ ಬಾಕಿ ಬಿಲ್‌ಗಳಿಗೆ ಆಗ್ರಹಿಸಿದ್ದು, ಈ ವೇಳೆ ಕಮೀಷನ್ ಆರೋಪದ (Corruption Allegation) ಬಗ್ಗೆ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಸಿಎಂ ತವರಲ್ಲೇ ಇಂದಿರಾ ಕ್ಯಾಂಟಿನ್ ನಡೆಸಲು ನಿರಾಸಕ್ತಿ; ಬಯಲಾಯ್ತು ಕಳ್ಳ ಲೆಕ್ಕ – ʻಪಬ್ಲಿಕ್ʼ ವರದಿಯಿಂದ ಎಚ್ಚೆತ್ತ ಪಾಲಿಕೆ
ಸಣ್ಣ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಇಲಾಖೆಗಳಲ್ಲಿ ಸರ್ಕಾರ ಕಾಮಗಾರಿಗಳಿಗೆ ಅಗತ್ಯ ಹಣ ಬಿಡುಗಡೆ ಮಾಡಿಲ್ಲ. ಗುತ್ತಿಗೆದಾರರಿಗೆ ಸರ್ಕಾರ ಬಾಕಿ ಹಣ ಬಿಡುಗಡೆ ಮಾಡಿಲ್ಲ, ಗುತ್ತಿಗೆದಾರರು ಸಂಕಷ್ಟದಲ್ಲಿದ್ದಾರೆ. ಅನ್ಯ ರಾಜ್ಯಗಳ ಗುತ್ತಿಗೆದಾರರಿಗೆ ಸರ್ಕಾರ ಹೆಚ್ಚು ಹಣ ಬಿಡುಗಡೆ ಮಾಡಿದೆ. ಈ ಮೂಲಕ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್ ಹಗರಣ ನಡೀತಿದೆ. ರಾಜ್ಯದ ಗುತ್ತಿಗೆದಾರರಿಗೆ ಅನ್ಯಾಯ ಮಾಡಲಾಗಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದೊಡ್ಡ ಹಗರಣ ನಡೆದಿದೆ, ಸರ್ಕಾರ ಇದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಯತ್ನಾಳ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಯತ್ನಾಳ್ ಆರೋಪಗಳಿಗೆ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಂತರ ಕೆಲಕಾಲ ಸದನದಲ್ಲಿ ಗದ್ದಲ, ಕೋಲಾಹಲ ನಡೆಯಿತು. ಬಳಿಕ ಸ್ಫೀಕರ್ ಗದ್ದಲವನ್ನು ಸಹಜ ಸ್ಥಿತಿಗೆ ತಂದರು. ಇದನ್ನೂ ಓದಿ: ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ – ಶಿರಸಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ
ಅಲ್ಲದೇ ವಿಜಯಪುರದಲ್ಲಿ ಕುಡಿಯುವ ನೀರಿಗೆ ಬಹಳ ತೊಂದರೆಯಾಗುತ್ತಿದೆ. 15 ದಿನಕ್ಕೊಮ್ಮೆ ನೀರು ಬರುತ್ತಿದೆ. ಬೇಸಿಗೆಯಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗಲಿದೆ. ಈ ಹಿಂದಿನ ಬಿಜೆಪಿ ಸರ್ಕಾರ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು 52 ಕೋಟಿ ರೂ. ಅಂದಾಜು ವೆಚ್ಚದ ಪಟ್ಟಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಿತ್ತು. ವಿಜಯನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನ ಬಿಡುಗಡೆ ಮಾಡಿ ಸಮಸ್ಯೆಗೆ ಪರಿಹಾರ ಕೊಡಬೇಕು ಮನವಿ ಮಾಡಿದರು.