ವಿಜಯಪುರ: ಮುಸ್ಲಿಮರು ಮೂರು ಕಡೆಗಳಲ್ಲಿ ಲಾಭ ಪಡೆಯುತ್ತಿದ್ದಾರೆ. ಒಂದೇ ಕಡೆ ಲಾಭ ಸಿಗಬೇಕು. ಮೀಸಲಾತಿ (Muslim Reservation) ಇವರಪ್ಪನ ಮನೆಯದಾ ಎಂದು ಮೀಸಲಾತಿ ಕಡಿತ ವಿಚಾರಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಪ್ರತಿಕ್ರಿಯಿಸಿದರು.
ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ದಲಿತರಿಗೆ ಇನ್ನು 2 ಪರ್ಸೆಂಟ್ ಮೀಸಲಾತಿ ಹೆಚ್ಚು ಮಾಡ್ತೀವಿ. ದಲಿತರಿಗೆ ಈಗ 17 ಮಾಡಿದ್ದೇವೆ, ಮುಂದೆ ನರೇಂದ್ರ ಮೋದಿ ಅವರು 21 ಪರ್ಸೆಂಟ್ ಮಾಡ್ತಾರೆ ಎಂದರು. ಇದನ್ನೂ ಓದಿ: ಮುಸ್ಲಿಮರಿಗೆ 2ಬಿ ಮೀಸಲಾತಿ ರದ್ದು: ರಾಜ್ಯಪಾಲರಿಗೆ ದೂರು ನೀಡಲು ಎಎಪಿ ನಿರ್ಧಾರ
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ರದ್ದು ಮಾಡ್ತೀವಿ ಎಂದ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ ಅವರು, ಐತಿಹಾಸಿಕ ನಿರ್ಣಯದಿಂದ ಕಾಂಗ್ರೆಸ್ ಕಂಗಾಲಾಗಿದೆ. ಕಾಂಗ್ರೆಸ್ ಥರಥರ ಎಂದು ಅಲುಗಾಡಿ ಹೋಗಿದೆ. ಡಿಕೆಶಿಗೆ ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡ್ತೀವಿ ಎಂದು ಚುನಾವಣೆಯಲ್ಲಿ ಹೇಳಲಿ. ಮೀಸಲಾತಿ ರದ್ದು ಮಾಡ್ತೀವಿ ಎಂದ್ರೆ ಕಾಂಗ್ರೆಸ್ ಡೆಪಾಜಿಟ್ ರದ್ದಾಗುತ್ತೆ ಎಂದು ಕುಟುಕಿದರು.
ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, 5 ವರ್ಷ ಸಿಎಂ ಆಗಿದ್ದವರಿಗೆ ಈ ಪರಿಸ್ಥಿತಿ ಬರಬಾರದಿತ್ತು. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲ್ಲ. ಸಿದ್ದರಾಮಯ್ಯರನ್ನ ಬಲಿಪಶು ಮಾಡಲಿದ್ದಾರೆ. ಸಿದ್ದರಾಮಯ್ಯ ಸಮುದಾಯದವರು ಕಾಂಗ್ರೆಸ್ ಬೆಂಬಲಿಸಬಾರದು. ನಾಳೆ ಗೂಂಡಾನನ್ನ (ಡಿಕೆಶಿಯನ್ನ) ಸಿಎಂ ಮಾಡಿದ್ರೆ ನಾವು, ನೀವು ಸೇರಿಯೇ ಸಾಯ್ತೇವೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಚಾಟಿ ಬೀಸಿದರು. ಇದನ್ನೂ ಓದಿ: ಮೈಸೂರಿನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೊರಟಾಗ ದೊಡ್ಡಗೌಡ್ರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಪತ್ನಿ
ಅತಿಯಾದ ಮುಸ್ಲಿಂ ತುಷ್ಟೀಕರಣವೇ ಸಿದ್ದರಾಮಯ್ಯ ಈ ಸ್ಥಿತಿಗೆ ಕಾರಣ. ಸಿದ್ದರಾಮಯ್ಯ ಒನ್ ಸೈಡ್ ಹೋಗಿದ್ದಾರೆ. ಎಲ್ಲ ಜನಾಂಗಗಳನ್ನ ಪ್ರೀತಿ ಮಾಡಬೇಕು. ಒಂದೇ ಜನಾಂಗವನ್ನ ತಲೆ ಮೇಲೆ ಕೂರಿಸಿಕೊಂಡ್ರೆ, ಉಳಿದವರು ಬುದ್ಧಿ ಕಲಿಸುತ್ತಾರೆ ಎಂದು ಟಾಂಗ್ ಕೊಟ್ಟರು.
ವರುಣಾ ಕೂಡ ಸಿದ್ದರಾಮಯ್ಯಗೆ ಅಷ್ಟು ಸುಲಭ ಇಲ್ಲ. ವರುಣಾದಲ್ಲೂ ಸಿದ್ದರಾಮಯ್ಯ ಗೆಲ್ಲೋದು ಕಷ್ಟ. ಸೋಶಿಯಲ್ ಇಂಜಿನಿಯರಿಂಗ್ ಅಷ್ಟು ಸರಿ ಇಲ್ಲ. ಮೊದಲು ಜನ ಮುಗ್ದರಿದ್ದರು. ವೋಟು ಹಾಕ್ತಿದ್ರು, ಈಗ ಯಾರು ಏನು ಮಾಡಿದ್ದಾರೆ ಅನ್ನೋ ಲಿಸ್ಟ್ ಜನರ ಬಳಿ ಇದೆ ಎಂದರು.