-ಬಿಎಸ್‌ವೈ ಜೀ ಆಪ್ ಚುಪ್ ಬೈಟೊ, ಆಪ್ ಕೀ ಪೋತಾ, ಪೋತಿಕೊ ಸಂಬಾಲೊ ಎಂದು ವ್ಯಂಗ್ಯ
ನವದೆಹಲಿ: ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ. ಅದ್ರೆ ಸಿದ್ದರಾಮಯ್ಯ, ವಿಜಯೇಂದ್ರ ಅಡ್ಜಸ್ಟ್ಮೆಂಟ್ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಎಂದು ಕಿಡಿಕಾರಿದ್ದಾರೆ.
Advertisement
ದೆಹಲಿಯಲ್ಲಿ (Delhi) ಮಾತನಾಡಿದ ಅವರು, ನಿನ್ನೆ ನಮ್ಮ ಕೆಲವು ನಾಯಕರು ಕೆಲವರನ್ನು ಭೇಟಿಯಾಗಿದ್ದಾರೆ. ಇಂದು ಲಿಂಗಾಯತ ನಾಯಕರು ಹೈಕಮಾಂಡ್ ಭೇಟಿ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲ ಲಿಂಗಾಯತರು ಬಿಎಸ್‌ವೈ (BS Yediyurappa) ಪರವಾಗಿಲ್ಲ. ಅವರು ಆ ಗೌರವ ಉಳಿಸಿಕೊಂಡಿಲ್ಲ. ವಿಜಯೇಂದ್ರನನ್ನು ಅಧ್ಯಕ್ಷ ಮಾಡುವುದಕ್ಕೆ ನಮ್ಮ ವಿರೋಧವಿದೆ. ಇಬ್ಬರು, ಮೂವರು ಪೇಮೆಂಟ್ ಸ್ವಾಮಿಗಳು ಅವರ ಜೊತೆಗಿದ್ದಾರೆ ಅಷ್ಟೇ. ವಿಜಯೇಂದ್ರ (BY Vijayendra) ಬಿಎಸ್‌ವೈ ಅವರು ನಕಲಿ ಸಹಿ ಮಾಡಿದ್ದಾರೆ. ಆದರೆ ಈ ಕುರಿತು ಸಿದ್ದರಾಮಯ್ಯ ಅವರಿಗೆ ತನಿಖೆ ಮಾಡಲು ಏನು ಕಷ್ಟ. ಎಲ್ಲ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ವಿಜಯೇಂದ್ರ ಕರ್ಮಕಾಂಡ, ಹಲ್ಕಾ ಕೆಲಸ ಬಹಳ ಇದೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ನೆತನ್ಯಾಹು ಭೇಟಿ ಬೆನ್ನಲ್ಲೇ ಗಾಜಾದ ಮೇಲೆ ಕಣ್ಣಿಟ್ಟ ಅಮೆರಿಕ – ಟ್ರಂಪ್ ಕೊಟ್ಟ ಆಫರ್ ಏನು?
Advertisement
Advertisement
ಬಹಳಷ್ಟು ಲಿಂಗಾಯತ ನಾಯಕರನ್ನು ಮುಗಿಸಿದ್ದಾರೆ. ಬಸವರಾಜ್ ಪಾಟೀಲ್ ಸೇಡಂ, ಬಿ.ವಿ ಶಿವಪ್ಪ, ಸಿದ್ದೇಶ್ವರ್, ಮಲ್ಲಿಕಾರ್ಜುನಯ್ಯ, ಜೊತೆಗೆ ನನ್ನನ್ನು ಸತತವಾಗಿ ಮುಗಿಸುವ ಪ್ರಯತ್ನ ಮಾಡಿದರು,. ರಮೇಶ್ ಜಾರಕಿಹೊಳಿ ರಸ್ತೆಗೆ ಬರಲು ಬಿಡಲ್ಲ ಅಂತಾರೆ. ಏನು ಗೂಂಡಾಗಿರಿ ಮಾಡ್ತಿದ್ದಾರಾ? ಮೂರು ಅಂಶಗಳನ್ನು ಹೈಕಮಾಂಡ್ ಗಮನಕ್ಕೆ ತರುತ್ತೇವೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ಅಂತ್ಯ ಮಾಡಬೇಕು. ಹಿಂದೂಗಳ ಹತ್ಯೆ ಆಯಿತು ಬಿಎಸ್‌ವೈ ಏನಾದರೂ ಮಾಡಿದ್ರಾ? ಶಿವಮೊಗ್ಗದಲ್ಲಿ ಔರಂಗಜೇಬನ ಫೋಟೋ ಹಾಕಿದ್ದಾಗ ಏನು ಮಾಡಿದ್ರು? ಜಮೀರ್ ಅಹಮದ್ ಖಾನ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ನಮ್ಮ ತಂಡದಲ್ಲಿ ಕುಟುಂಬ ರಾಜಕೀಯ ಇಲ್ಲ. ಸಿದ್ದೇಶ್ವರ್, ಲಿಂಬಾವಳಿ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಅವರ ಮನೆಯವರು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ಕೊಟ್ಟ ಭಿಕ್ಷೆಯಿಂದ ವಿಜಯೇಂದ್ರ ಶಾಸಕರಾಗಿದ್ದಾರೆ. ಅದು ಡಿಕೆಶಿ ಅವರ ಆಶೀರ್ವಾದದಿಂದ ಆಗಿದ್ದಾರೆ. ಮೊದಲ ಬಾರಿ ಶಾಸಕರಾಗಿ ರಾಜ್ಯಾಧ್ಯಕ್ಷರಾಗಿದ್ದಾರೆ. ರಮೇಶ್ ಜಾರಕಿಹೊಳಿ, ಸಿ.ಪಿ ಯೋಗೇಶ್ವರರಿಂದ ಸರ್ಕಾರ ಬಂತು, ಜಾರಕಿಹೊಳಿ ಪಕ್ಷ ಗಟ್ಟಿ ಮಾಡಲು ಬಂದವರು, ವಿಜಯೇಂದ್ರ ಮಾಡಿದ್ದೇನು? ನಕಲಿ ಸಹಿ ಮಾಡಿ ಭ್ರಷ್ಟಾಚಾರ ಮಾಡಿದರು. ಶ್ರೀರಾಮುಲು ನಿಮ್ಮ ಜೊತೆಗಿದ್ದೇನೆ ಎಂದು ಹೇಳಿದ್ದಾರೆ ಎಂದರು.
Advertisement
ದುಡ್ಡಿನ ಅಹಂಕಾರದಿಂದ ಎಲ್ಲರನ್ನು ಖರೀದಿ ಮಾಡಬಹುದು ಅಂದುಕೊಂಡಿದ್ದಾರೆ. ಎಲ್ಲರನ್ನು ಎಲ್ಲ ಸಮಯದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ, ನಿನ್ನ ಬಳಿ ದುಡ್ಡು ಇರಬಹುದು, ಚಾರಿತ್ರ‍್ಯ ಇಲ್ಲ. ನಾನು ಅಧ್ಯಕ್ಷನಾಗಲು ಪ್ರಯತ್ನ ಮಾಡುತ್ತಿಲ್ಲ. ಯಾವುದೇ ಸಮುದಾಯದ ನಾಯಕರು ಅಧ್ಯಕ್ಷರಾಗಬಹುದು. ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದೆ, ಅವರು ಹೇಳಿದ ತಕ್ಷಣ ನಿಮಗೆ ತಿಳಿಸುತ್ತೇವೆ. ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಹೈಕಮಾಂಡ್ ನಿರ್ಧಾರ ಬದಲಾವಣೆ ಮಾಡಿದ್ದರೆ ಮುಂದೆ ಏನು ಮಾಡುತ್ತೇವೆ ಎನ್ನುವ ಕುರಿತು ಹೇಳುತ್ತೇನೆ ಎಂದು ಹೇಳಿದರು.
ಯಡಿಯೂರಪ್ಪ ಹೊಸ ನಾಟಕ ಕಂಪನಿ ತೆಗೆದಿದ್ದಾರೆ. ಹುಷಾರಿಲ್ಲ ಎಂದು ನಾಟಕ ಮಾಡುತ್ತಿದ್ದಾರೆ. ಹುಷಾರಿಲ್ಲದವರು ನಿನ್ನೆ ಸಿದ್ದರಾಮಯ್ಯರನ್ನು ಹೇಗೆ ಭೇಟಿ ಮಾಡಿದರು? ಎಲ್ಲರನ್ನು ಕರೆಸಿಕೊಂಡು ಸಿಂಪಥಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಹೆಚ್ಚು ಮೊಮ್ಮಕ್ಕಳಿದ್ದಾರೆ, ಆಟ ಆಡ್ತಾ ಕೂತರೆ ನೂರು ವರ್ಷ ಬದುಕಬಹುದು. ಯಡಿಯೂರಪ್ಪ ಜೀ ಆಪ್ ಚುಪ್ ಬೈಟೊ, ಆಪ್ ಕೀ ಪೋತಾ, ಪೋತಿಕೊ ಸಂಬಾಲೊ ಎಂದು ವ್ಯಂಗ್ಯವಾಡಿದರು.ಇದನ್ನೂ ಓದಿ: ಬೆಂಗಳೂರಿನಲ್ಲಿ ಯಶ್ ಜೊತೆ ನಯನತಾರಾ ‘ಟಾಕ್ಸಿಕ್’ ಶೂಟಿಂಗ್ ಶುರು