– ಶೂನ್ಯವೇಳೆಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್ ಪ್ರಸ್ತಾಪ
– ಕಿಡಿಗೇಡಿಗಳ ಮನೆ ಮೇಲೆ ಬುಲ್ಡೋಜರ್ ಪ್ರಯೋಗಿಸಲು ಬಿಜೆಪಿ ಶಾಸಕರ ಒತ್ತಾಯ
ಬೆಳಗಾವಿ: ಸದನದ ಕಲಾಪದಲ್ಲಿಂದು ಉತ್ತರ ಕರ್ನಾಟಕದ ಚರ್ಚೆ ವೇಳೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal), ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಪರೋಕ್ಷವಾಗಿ ಲೇವಡಿ ಮಾಡಿದ ಪ್ರಸಂಗ ನಡೆಯಿತು.
ಉತ್ತರಕರ್ನಾಟಕದ (UttarKarnataka) ಸಮಗ್ರ ಅಭಿವೃದ್ಧಿಯಾಗ್ತಿಲ್ಲ. ಹಳೇ ಮೈಸೂರು ಭಾಗ ಮಾತ್ರ ಅಭಿವೃದ್ಧಿಯಾಗ್ತಿದೆ. ಅದಕ್ಕೆ ಮೈಸೂರು ಮಹಾರಾಜರು ಕಾರಣ. ಹಾಗೆಯೇ ಕನಕಪುರ ಕ್ಷೇತ್ರವೂ (Kanakapura Constituency) ಅಭಿವೃದ್ಧಿಯಾಗಿಲ್ಲ. ಅಲ್ಲಿರುವ ಶಾಸಕರ ಆದಾಯ ಮಾತ್ರ ವರ್ಷವರ್ಷವೂ ಹೆಚ್ಚಾಗ್ತಿದೆ. 50 ಕೋಟಿ ರೂ. ನಿಂದ 100 ಕೋಟಿ ರೂ., 1,583 ಕೋಟಿ ರೂ. ವರೆಗೂ ಹೆಚ್ಚಾಗಿದೆ. ಆದ್ರೆ ಕನಕಪುರದ ಅಭಿವೃದ್ಧಿ ಮಾತ್ರ ಕುಂಠಿತವಾಗಿದೆ ಎಂದು ಪರೋಕ್ಷವಾಗಿ ಕುಟುಕಿದರು.
Advertisement
Advertisement
ಮುಂದುವರಿದು, ಸುವರ್ಣಸೌಧಕ್ಕೆ ಲೈಟಿಂಗ್, ಫೌಂಟೇನ್ ಹಾಕೋದ್ರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಯಾಗಲ್ಲ. 10 ದಿನಗಳ ಕಾಟಾಚಾರದ ಸದನದಿಂದ ಪ್ರಯೋಜನವಿಲ್ಲ. ಈ ಭಾಗದಲ್ಲಿ ಕಚೇರಿಗಳನ್ನ ಪ್ರಾರಂಭಿಸಿ, ಹೆಚ್ಚಿನ ಅನುದಾನ ಒದಗಿಸಿ ಅಂತ ಸರ್ಕಾರಕ್ಕೆ ಯತ್ನಾಳ್ ಒತ್ತಾಯಿಸಿದರು. ಇದನ್ನೂ ಓದಿ: ದಶಪಥ ಹೆದ್ದಾರಿಯಲ್ಲಿ ನಿರ್ಮಾಣವಾಗದ ಸ್ಕೈವಾಕ್ – ಜೀವ ಭಯದಲ್ಲಿ ರಸ್ತೆ ದಾಟುವ ಸಾರ್ವಜನಿಕರು
Advertisement
ಬುಲ್ಡೋಜರ್ ಪ್ರಯೋಗಿಸಿ: ಬೆಳಗಾವಿಯ (Belagavi) ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಸದ್ದು ಮಾಡಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುನೀಲ್ ಕುಮಾರ್ ಹಾಗೂ ಶಶಿಕಲಾ ಜೊಲ್ಲೆ ಇದೊಂದು ಅಮಾನವೀಯ ಕೃತ್ಯ. ಭವಿಷ್ಯದಲ್ಲಿ ಇಂತಹ ಪ್ರಕರಣಗಳು ನಡೆಯಬಾರದು ಅಂತ ಆಕ್ರೋಶ ಹೊರಹಾಕಿದರು.
Advertisement
ಕೃತ್ಯ ಎಸಗಿದ ಕಿಡಿಗೇಡಿಗಳ ಮನೆ ಮೇಲೆ ಯುಪಿ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗ ಮಾಡಬೇಕು ಎಂದು ಸುನೀಲ್ ಕುಮಾರ್ ಆಗ್ರಹಿಸಿದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಬೇಕು. ಯಾವುದೇ ಕಾರಣಕ್ಕೂ ಅವರಿಗೆ ಬೇಲ್ ಸಿಗದಂತೆ ನೋಡಿಕೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದರು. ಈ ವೇಳೆ ಪ್ರಕರಣದ ಬಗ್ಗೆ ವಿವರಣೆ ನೀಡಿದ ಗೃಹ ಸಚಿವ ಪರಮೇಶ್ವರ್, ಇದನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ‘ಸಲಾರ್’ ಸಿನಿಮಾಗೆ ಐದೂ ಭಾಷೆಗಳಿಗೂ ತಾವೇ ಡಬ್ ಮಾಡಿದ ಪೃಥ್ವಿರಾಜ್
ಮಹಿಳೆ ಮತ್ತು ಅವರ ಕುಟುಂಬಕ್ಕೆ ರಕ್ಷಣೆ ಕೊಡಲಾಗುತ್ತದೆ. ಪ್ರಕರಣದಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಏಳು ಆರೋಪಿಗಳನ್ನ ಬಂಧಿಸಿದ್ದೇವೆ, ಅದೇ ರೀತಿ ಓಡಿಹೋದ ಹುಡಗ-ಹುಡುಗಿಯನ್ನು ಹುಡುಕುವ ಪ್ರಯತ್ನ ನಡೆದಿದೆ ಎಂದು ಉತ್ತರಿಸಿದರು. ಇದನ್ನೂ ಓದಿ: ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಚಾಕು ಇರಿದ ದುಷ್ಕರ್ಮಿಗಳು