ವಿಜಯಪುರ: ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಉಚಿತವಾಗಿ ವೀಕ್ಷಣೆ ಮಾಡುವಂತೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಜಿಲ್ಲೆಯ ಜನತೆಗಾಗಿ ವ್ಯವಸ್ಥೆ ಮಾಡಿದ್ದಾರೆ.
ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಇದೆ ತಿಂಗಳ 21 ರಿಂದ ಒಂದು ವಾರದ ವರೆಗೆ ಉಚಿತ ಒಂದು ಶೋ ವ್ಯವಸ್ಥೆ ಮಾಡಿದ್ದಾರೆ. ಮಧ್ಯಾಹ್ನ 3 ಗಂಟೆಯ ಶೋವನ್ನು ಸಾರ್ವಜನಿಕರು ಉಚಿತವಾಗಿ ವೀಕ್ಷಿಸಬಹುದಾಗಿದೆ. ಇನ್ನು ಇದೆ ರೀತಿ ಉರಿ ಸೇರಿದಂತೆ ಅನೇಕ ದೇಶ ಭಕ್ತಿ ಚಿತ್ರಗಳನ್ನ ಉಚಿತವಾಗಿ ಜನರಿಗೆ ವೀಕ್ಷಿಸಲು ಯತ್ನಾಳ್ ವ್ಯವಸ್ಥೆ ಮಾಡಿದ್ದರು. ಅದೇ ರೀತಿ ಈ ಬಾರಿ ಕಶ್ಮೀರ್ ಫೈಲ್ಸ್ ಚಿತ್ರ ವೀಕ್ಷಣೆಗೂ ಅವಕಾಶ ಕಲ್ಪಿಸಿದ್ದಾರೆ. ಇದನ್ನೂ ಓದಿ: ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆಗಾಗಿ ಸದನದಲ್ಲೇ ಆಹ್ವಾನಿಸಿದ ಸ್ಪೀಕರ್ ಕಾಗೇರಿ
ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಶ್ಮೀರದ ಚಿತ್ರಣವನ್ನು ಕಟ್ಟಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ನಮಗೂ ಅಲ್ಲಿನ ಪರಿಸ್ಥಿತಿ ಬರಬಹುದು ಎನ್ನುವ ಜಾಗೃತಿ ಸಂದೇಶ ಮೂಡಿಸುವ ಸಿನಿಮಾವಾಗಿದೆ. ಪ್ರಧಾನ ಮಂತ್ರಿಯವರನ್ನು ದಿ ಕಶ್ಮೀರ್ ಫೈಲ್ಸ್ ಚಿತ್ರದ ನಿರ್ಮಾಪಕರ, ನಿರ್ದೇಶಕರು ಭೇಟಿಯಾಗಿದ್ದಾರೆ. ಒಂದು ವಾರದವರೆಗೆ ಉಚಿತವಾಗಿ ಸಿನಿಮಾವನ್ನು ತೆರೆಯ ಮೇಲೆ ನೋಡಬಹುದಾಗಿದೆ. ನಾನು ಹಣವನ್ನು ಕೊಡುತ್ತೇನೆ ಎಂದು ಹೇಳಿದ್ದೆನೆ. ನಮ್ಮ ಜಿಲ್ಲೆಯ ಜನ ಈ ಸಿನಿಮಾವನ್ನು ನೋಡಬಹುದಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್