ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಎರಡನೇ ಬಾರಿ ಬಿಜೆಪಿಯಿಂದ (BJP) ಉಚ್ಛಾಟನೆಯಾಗಿದ್ದಾರೆ.
ಈ ಮೊದಲು 2015ರಲ್ಲಿ ವಿಜಯಪುರದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಬಯಸಿದ್ದರು. ಆದರೆ ಟಿಕೆಟ್ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದ್ದರು.
- Advertisement -
ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಆರೋಪದ ಮೇಲೆ ಪಕ್ಷ ಅವರನ್ನು 6 ವರ್ಷಗಳ ಕಾಲ ಉಚ್ಛಾಟನೆ ಮಾಡಿತ್ತು. ನಂತರ ಉಚ್ಛಾಟನೆಯನ್ನು ಹಿಂಪಡೆದ ಬಿಜೆಪಿ 2018ರ ಚುನಾವಣೆಯಲ್ಲಿ ಯತ್ನಾಳ್ ಅವರಿಗೆ ಬಿಜೆಪಿ ಟಿಕೆಟ್ ನೀಡಿತ್ತು. ಈ ಚುನಾವಣೆಯಲ್ಲಿ ಯತ್ನಾಳ್ 6 ಸಾವಿರ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಜಯಗಳಿದ್ದರು. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆ | ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ತೆಗೆದುಕೊಂಡ ಕ್ರಮ – ವಿಜಯೇಂದ್ರ
- Advertisement -
- Advertisement -
ಈಗ ಮತ್ತೆ 6 ವರ್ಷಗಳ ಕಾಲ ಬಿಜೆಪಿ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿದೆ. ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಿಸ್ತು ಸಮಿತಿ 6 ವರ್ಷ ಉಚ್ಛಾಟನೆ ಮಾಡಿ ಆದೇಶ ಪ್ರಕಟಿಸಿದೆ.
- Advertisement -
ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೇ ಆಗಾಗ ವಿಧಾನಸಭೆಯಲ್ಲೇ ಸರ್ಕಾರದ ವಿರುದ್ಧ ಯತ್ನಾಳ್ ಅಸಮಾಧಾನ ಹೊರಹಾಕುತ್ತಿದ್ದರು. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ನೇರಾನೇರವಾಗಿ ವಾಗ್ದಾಳಿ ನಡೆಸುತ್ತಿದ್ದರು. ಈ ಸಂಬಂಧ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್‌ಗೆ ಸಮರ್ಪಕವಾದ ಉತ್ತರ ನೀಡದ ಕಾರಣ ಈಗ ಯತ್ನಾಳ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಇದನ್ನೂ ಓದಿ: ಸತ್ಯವಂತರಿಗಿದು ಕಾಲವಲ್ಲ.. ದುಷ್ಟಜನರಿಗೆ ಸುಭಿಕ್ಷಕಾಲ: ಉಚ್ಚಾಟನೆಗೆ ದಾಸರ ಹಾಡಿನ ಮೂಲಕ ಯತ್ನಾಳ್ ಕೌಂಟರ್
2023ರ ಚುನಾವಣೆಯಲ್ಲಿ ಯತ್ನಾಳ್ 8,233 ಮತಗಳಿಂದ ಜಯಗಳಿಸಿದ್ದರು. ಯತ್ನಾಳ್ 94,211 ಮತಗಳನ್ನು ಪಡೆದರೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಅಬ್ದುಲ್ ಹಮೀದ್ 85,978 ಮತಗಳನ್ನು ಪಡೆದಿದ್ದರು.