ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ 10 ಬಿಜೆಪಿ (BJP) ಶಾಸಕರ ಅಮಾನತಾದ ಬಳಿಕ, ಆವರಣದಲ್ಲಿ ನೂಕಾಟ ತಳ್ಳಾಟ ಏರ್ಪಟ್ಟು ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ.
Advertisement
ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆ ಸ್ಪೀಕರ್ ಯುಟಿ ಖಾದರ್, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಿದರು. ಸಸ್ಪೆಂಡ್ ಆದ ಬಳಿಕವೂ ಬಿಜೆಪಿ ಸದಸ್ಯರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಾರ್ಷಲ್‌ಗಳು ಅಮಾನತಾದ ಶಾಸಕರನ್ನು ಸದನದಿಂದ ಹೊರಹಾಕುವ ಕೆಲಸ ಮಾಡಿದರು. ಇದನ್ನೂ ಓದಿ: ಮಸೂದೆಗಳ ಪ್ರತಿ ಹರಿದು ಡೆಪ್ಯುಟಿ ಸ್ಪೀಕರ್‌ನತ್ತ ತೂರಿದ ವಿಪಕ್ಷಗಳು – ಬಿಜೆಪಿಯ 10 ಶಾಸಕರು ಅಮಾನತು
Advertisement
Advertisement
ಈ ವೇಳೆ ಸ್ಥಳದಲ್ಲಿ ನೂಕಾಟ ತಳ್ಳಾಟ ಜೋರಾಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆಯ ಆವರಣದಲ್ಲಿ ಕುಸಿದು ಬಿದ್ದಿದ್ದಾರೆ. ಯತ್ನಾಳ್ ಅವರಿಗೆ ಬಿಪಿ ಏರಿಕೆ ಹಾಗೂ ಶುಗರ್‌ನಲ್ಲಿ ಏರುಪೇರಾಗಿದೆ ಎನ್ನಲಾಗಿದೆ. ಇದೀಗ ಯತ್ನಾಳ್ ಅವರನ್ನು ಚಿಕಿತ್ಸೆಗೆ ಅಂಬುಲೆನ್ಸ್ನಲ್ಲಿ ಪೋರ್ಟಿಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಸದನದಲ್ಲಿ ‘ಐಎಎಸ್’ ಕೋಲಾಹಲ – ಸ್ಪೀಕರ್ ಮೇಲೆ ಹರಿದ ಹಾಳೆ ಎಸೆದ ಬಿಜೆಪಿ, ಜೆಡಿಎಸ್ ಸದಸ್ಯರು
Advertisement
Web Stories