ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಚಪ್ಪಲಿಯಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿಕೆಶಿ ಇಬ್ಬರ ನೇತೃತ್ವದ ಸರ್ಕಾರ ಐದು ವರ್ಷ ಪೂರ್ಣಗೊಳಿಸಲ್ಲ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಅಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಎಷ್ಟು ಸಾಧ್ಯವೋ ಅಷ್ಟು ಬೇಗ ಈ ಸರ್ಕಾರ ಕಿತ್ತೊಗೆಯೋಣ – ಯಡಿಯೂರಪ್ಪ ಸಂಕಲ್ಪ
ಡಿಕೆಶಿ ಅವರು ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಹೋಗಿ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿ (Sonia Gandhi) ಗೆ ಅಂಜಿಸುವ ಕೆಲಸ ಮಾಡುತ್ತಾರೆ. ಬೊಮ್ಮಾಯಿ (Basavaraj Bommai) ಯವರೇ ಅವರನ್ನ ನೀವು ಮನೆವರೆಗೂ ಬಿಟ್ಟುಕೊಳ್ಳಬೇಡಿ. ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ. ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲ ಅಂತಾ ಹೇಳಿ. ಅವರನ್ನ ಸ್ವಾಗತಿಸಿಕೊಂಡ್ರೇ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ ಎಂದು ಯತ್ನಾಳ್ ತಿಳಿಸಿದರು.
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಹಲಕಟಗಿರಿ ಮಾಡೊದಿದ್ರೇ ಬಿಟ್ಟು ಹೋಗಿ. ನಾವು ಯಾರೂ ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಏನ್ ಹೇಳಿದರೂ ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ ದನ ಕಾಯುತ್ತಿಲ್ಲ ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.
ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ. ಪಕ್ಷ ನಿರ್ಣಯ ಮಾಡಿದವರು ವಿರೋಧ ಪಕ್ಷದ ನಾಯಕರು ಆಗಲಿದ್ದಾರೆ. ನಮ್ಮಲ್ಲಿ ಯಾವುದೇ ಒಳ ಪೈಪೋಟಿ ಇಲ್ಲಾ ಎಂದು ಯತ್ನಾಳ್ ಸ್ಪಷ್ಟಪಡಿಸಿದರು. ಇದನ್ನೂ ಓದಿ: 1,500 ಮಹಿಳೆಯರಿಂದ ಸೇನಾ ವಾಹನಗಳಿಗೆ ಮುತ್ತಿಗೆ – 12 ದಾಳಿಕೋರರ ಬಿಡುಗಡೆ