– ಉಚ್ಛಾಟನೆ ಬಳಿಕ ಬಿಎಸ್‌ವೈ ವಿರುದ್ಧ ಮತ್ತೆ ಸಿಡಿದ ಯತ್ನಾಳ್
ಬೆಂಗಳೂರು: ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) 2ನೇ ಬಾರಿ ಬಿಜೆಪಿಯಿಂದ (BJP) ಉಚ್ಛಾಟನೆಗೊಂಡ ಬಳಿಕವೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಅಲ್ಲದೇ ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ ಅಂತ ಬಾಂಬ್ ಸಿಡಿಸಿದ್ದಾರೆ.
ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಮಗ ಒತ್ತಡ ತಂದು ನನ್ನ ಉಚ್ಚಾಟನೆ ಮಾಡಿಸಿದ್ದಾರೆ. ಯಾವ ವೀರಶೈವ ಲಿಂಗಾಯತರು ಯಡಿಯೂರಪ್ಪ ಜೊತೆಗಿಲ್ಲ. ಭ್ರಮೆಯಿಂದ ಕೇಂದ್ರದವರು ಹೊರಗೆ ಬರಬೇಕು. ರಾಮಾಯಣ, ಮಹಾಭಾರತದಲ್ಲೂ ಅಪಮಾನ ಮಾಡಿರೋದಿದೆ. ಹಾಗಾಗಿ ನನಗೆ ಯಾವ ಮುಜುಗರವೂ ಇಲ್ಲ. ಬಿಎಸ್‌ವೈ ಕುಟುಂಬವನ್ನು ನಾನು ಹೊರಗೆ ಇಡೋವರೆಗೂ ಬಿಡೋದಿಲ್ಲ ಅಂತ ಶಪಥ ಮಾಡಿದ್ದಾರೆ. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆಯಿಂದ ಒತ್ತಡಕ್ಕೆ ಒಳಗಾಗಿದ್ದ ಬಿಜೆಪಿ ಪದಾಧಿಕಾರಿ – ಕಾರು ಅಪಘಾತದಲ್ಲಿ ಸಾವು
ಮೂರು ನನಗೆ ಲಕ್ಕಿ, 3ನೇ ಬಾರಿ ಉಚ್ಚಾಟನೆ ಮಾಡಿರೋದು, ಮುಂದೆ ಏನಾಗುತ್ತೆ ನೋಡಿ, ಇದಕ್ಕೆ ಕಾರಣಕರ್ತರಾದವರು ನಾಶ ಆಗ್ತಾರೆ. ಯಾರ ಮನವರಿಕೆಯೂ ನಾನು ಮಾಡಲ್ಲ. ಜನಮೆಚ್ಚಿದ ನಾಯಕ ಯಾರೂ ಇಲ್ಲ. ವಿಜಯೇಂದ್ರ ಸೇರಿ ಯಾರಿಗೂ 3 ಜನ ಸೇರಿಸೋ ಯೋಗ್ಯತೆ ಇಲ್ಲ. ಆದ್ರೆ ನಾನು ಬಾಡಿಗೆ ಜನ ತಂದಿಲ್ಲ. ನಿನ್ನೆ ವಿಜಯಪುರದಲ್ಲಿ ಬಾಡಿಗೆ ಕೊಟ್ಟು ಕರೆಸಿಲ್ಲ. ಕಳೆದ ಚುನಾವಣೆಯಲ್ಲಿ ಸಿಟಿ ರವಿಯನ್ನು ತನ್ನ ಚೇಲಾ ನಿಲ್ಲಿಸಿ ಯಡಿಯೂರಪ್ಪ ಸೋಲಿಸಿದ ಅಂತ ಯತ್ನಾಳ್ ಮಾರ್ಮಿಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ಯತ್ನಾಳ್ ಉಚ್ಛಾಟನೆ – ವಿಜಯಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು
ಮುಂದುವರಿದು.. ನಾನು ಮತ್ತೆ ದೆಹಲಿಗೆ ಹೋಗಲ್ಲ. ಮರುಪರಿಶೀಲನೆಗೆ ನಾನು ಮನವಿ ಮಾಡಲ್ಲ. ನಾನು ಹಿಂದೂ ಪರವಾಗಿ ಹೋರಾಟ ಮಾಡ್ತೇನೆ. ಇಡೀ ರಾಜ್ಯ ಸುತ್ತುತ್ತೇನೆ. ಜನರೇ ಹೊಸ ಪಕ್ಷ ಕಟ್ಟಲು ಸಲಹೆ ಕೊಡ್ತಿದ್ದಾರೆ. ಹಿಂದೂಗಳ ರಕ್ಷಣೆ ಮಾಡುವವರು ಯಾರೂ ಇಲ್ಲ. ಉ.ಕರ್ನಾಟಕದ ಬಗ್ಗೆ ಮಾತನಾಡುವವರು ಯಾರೂ ಇಲ್ಲ. ನಮ್ಮ ಹಿಂದೆ ಬಹಳ ದೊಡ್ಡ ಶಕ್ತಿ ಇದೆ. ರಾಘವೇಂದ್ರ ಹೊರತು ಪಡಿಸಿ ಎಲ್ಲಾ ಸಂಸದರೂ ನಮ್ಮ ಪರ ಇದ್ದಾರೆ ಅಂತ ಯತ್ನಾಳ್ ಹೇಳಿದ್ದಾರೆ. ಇದನ್ನೂ ಓದಿ: ಯತ್ನಾಳ್ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿಯ ಮತ್ತೊಬ್ಬ ಮುಖಂಡ ರಾಜೀನಾಮೆ – ಬೆಂಬಲಿಗರಿಂದ ಪ್ರತಿಭಟನೆಗೆ ಸಜ್ಜು!